ಪಾರ್ಕ್ ಮಾಡಿದ್ದ ಬೈಕ್ ನ್ನು ಕದ್ದ ಕಳ್ಳರು!

bike
15/02/2023

ಪಾರ್ಕ್ ಮಾಡಿದ್ದ ಬೈಕನ್ನು ಕಳ್ಳತನ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ನಡೆದಿದೆ.

ಪೆರ್ಲಾಪುವಿನ ಮನೀಶ್ ಆಚಾರ್ಯ ಎಂಬುವವರು ತಮ್ಮ ಬೈಕಲ್ಲಿ ಮನೆಯಿಂದ ಹೊರಟು ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಮಾಣಿ ಸಂತೆ ಮಾರುಕಟ್ಟೆ ಬಳಿ ಬೆಳಿಗ್ಗೆ ವಾಹನ ನಿಲ್ಲಿಸಿ ಮಂಗಳೂರಿಗೆ ಹೋಗಿದ್ದರು.‌ ಮರಳಿ  ಮಾಣಿ ಸಂತೆ ಮಾರುಕಟ್ಟೆ ಬಳಿ ಬಂದಾಗ ನಿಲ್ಲಿಸಿದ್ದ ಬೈಕ್ ಇಟ್ಟ ಸ್ಥಳಕ್ಕೆ ಹೋದಾಗ ಸ್ಥಳದಲ್ಲಿ ಬೈಕ್‌ ಇರಲಿಲ್ಲ.

ಸುತ್ತ-ಮುತ್ತ ಪರಿಸರದಲ್ಲಿ ಹುಡುಕಾಡಿದರೂ ಬೈಕ್ ಪತ್ತೆಯಾಗಿಲ್ಲ. ಬೈಕನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದು ಬಯಲಾಗಿದೆ. ಇದರ ಅಂದಾಜು ಮೌಲ್ಯ 30,000 ರೂಪಾಯಿ ಆಗಬಹುದು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version