ಸಿನಿಮಾಗೆ ಪ್ರೇರಣೆಯಾದ ಪಾರ್ವತಿ ಅಮ್ಮಾಳ್ ಅವರ ಹೆಸರಿಗೆ 10 ಲಕ್ಷ ರೂ. ಠೇವಣಿ ಇಡಲಿರುವ ನಟ ಸೂರ್ಯ! - Mahanayaka
5:07 AM Wednesday 15 - October 2025

ಸಿನಿಮಾಗೆ ಪ್ರೇರಣೆಯಾದ ಪಾರ್ವತಿ ಅಮ್ಮಾಳ್ ಅವರ ಹೆಸರಿಗೆ 10 ಲಕ್ಷ ರೂ. ಠೇವಣಿ ಇಡಲಿರುವ ನಟ ಸೂರ್ಯ!

surya
17/11/2021

ಚೆನ್ನೈ: ಕರ್ನಾಟಕದಲ್ಲಿ ದಲಿತರ ಪರವಾಗಿ ಒಂದು ಧ್ವನಿ ಮೊಳಗಿದರೂ ಅದನ್ನು ಆಗಲೇ ಹತ್ತಿಕ್ಕುವ ಕೆಲಸವನ್ನು ಮಾಡಲಾಗುತ್ತಿದೆ ಎನ್ನುವ ನೋವಿನ ಸಂಗತಿಯ ನಡುವೆಯೇ, ತಮಿಳುನಾಡಿನಲ್ಲಿ ಆದಿವಾಸಿಗಳ ಬದುಕಿಗೆ ಭದ್ರತೆ ನೀಡುವ ಕೆಲಸವನ್ನು ಅಲ್ಲಿನ ನಟ, ನಟಿಯರು ಮಾಡುತ್ತಿದ್ದಾರೆ.


Provided by

ಇತ್ತೀಚೆಗೆ ಭಾರೀ ಸುದ್ದಿಯಾಗಿರುವ ‘ಜೈ ಭೀಮ್’ ಚಿತ್ರದ ನಟ ಸೂರ್ಯ ಇದೀಗ ಚಿತ್ರದ ಕಥಾವಸ್ತುವಾಗಿರುವ ಪಾರ್ವತಿ ಅಮ್ಮಾಳ್ ಅವರ ಹೆಸರಿನಲ್ಲಿ 10 ಲಕ್ಷ ರೂಪಾಯಿ ಫಿಕ್ಸ್ ಡ್ ಠೇವಣಿ ಇಡಲು ಮುಂದಾಗಿದ್ದಾರೆ.

ಪಾರ್ವತಿ ಅಮ್ಮಾಳ್ ಅವರ ಪತಿ ರಾಜಾಕಣ್ಣು ಪೊಲೀಸ್ ಕಸ್ಟಡಿಯಲ್ಲಿ ಹತ್ಯೆಯಾದ ನಂತರ ಅವರು ತಮ್ಮ ಪತಿಯ ಸಾವಿಗೆ ನ್ಯಾಯ ಕೇಳಿ ನ್ಯಾಯಕ್ಕಾಗಿ ಹೋರಾಡಿದರು. ಇವರಿಗೆ ಚಂದ್ರು ಎಂಬ ಖ್ಯಾತ ವಕೀಲರು ಹೋರಾಡಿ ನ್ಯಾಯ ದೊರಕಿಸಿಕೊಡುತ್ತಾರೆ. ಇದು ಜೈ ಭೀಮ್ ಚಿತ್ರದ ಕಥೆಯಾಗಿದೆ.

ಇದೀಗ ಪಾರ್ವತಿ ಅಮ್ಮಾಳ್ ಅವರ ಹೆಸರಿನಲ್ಲಿ ಸೂರ್ಯ ಮತ್ತು ಅವರ ಪತ್ನಿ, ನಟಿ ಜ್ಯೋತಿಕಾ ಅವರ ಹೋಮ್ ಪ್ರೊಡಕ್ಷನ್ ಬ್ಯಾನರ್ 2ದ ಎಂಟರ್ ಟೈನ್ ಮೆಂಟ್ ಪಾರ್ವತಿ ಅಮ್ಮಾಳ್ ಅವರ ಹೆಸರಿನಲ್ಲಿ 10 ಲಕ್ಷ ರೂಪಾಯಿ ಫಿಕ್ಸ್ ಡ್ ಠೇವಣಿ ಇಡಲು ನಿರ್ಧರಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG

ಇನ್ನಷ್ಟು ಸುದ್ದಿಗಳು

ಬೆಂಗಳೂರಿನ ಫ್ಲ್ಯಾಟ್ ನಲ್ಲಿ ಬೆಂಕಿ ಅವಘಡ | ಫ್ಲ್ಯಾಟ್ ನಿಂದ ಹೊರಗೆ ಓಡಿ ಬಂದ ನಿವಾಸಿಗಳು

ಬೈಕ್—ಲಾರಿ ಮಧ್ಯೆ ಭೀಕರ ಅಪಘಾತ: ಬೈಕ್ ಸವಾರನ ದಾರುಣ ಸಾವು

ಲೈಂಗಿಕ ದೌರ್ಜನ್ಯ: ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಶಿಕ್ಷಕನ ಸಹಿತ ಇಬ್ಬರ ಬಂಧನ!

ಶಾಕಿಂಗ್ ನ್ಯೂಸ್: 2 ಡೋಸ್ ಕೊವಿಡ್ ಲಸಿಕೆ ಪಡೆದಿದ್ದರೂ ವ್ಯಕ್ತಿ ಕೊರೊನಾಕ್ಕೆ  ಬಲಿ

ವಿಶಾಲ್ ರನ್ನು ನೋಡಿದಾಗ ನನ್ನ ತಮ್ಮನನ್ನು ನೋಡಿದ ಹಾಗೆಯೇ ಆಗುತ್ತದೆ, ಅಪ್ಪು ಬಳಿಯೂ ಇದನ್ನು ಹೇಳಿದ್ದೆ | ಶಿವರಾಜ್ ಕುಮಾರ್

ಪುನೀತ್ ಅವರಿಗೆ ‘ಕರ್ನಾಟಕ ರತ್ನ’ದ ಜೊತೆಗೆ ರಾಷ್ಟ್ರಮಟ್ಟದ ಉನ್ನತ ಗೌರವಕ್ಕೂ ಶಿಫಾರಸು | ಸಿಎಂ ಬಸವರಾಜ್ ಬೊಮ್ಮಾಯಿ

ಅಪಘಾತದಲ್ಲಿ ಮೃತಪಟ್ಟ ಪುನೀತ್ ಅಭಿಮಾನಿ ಕೊನೆಯ ಕ್ಷಣದಲ್ಲಿ ಪತ್ನಿಗೆ ಹೇಳಿದ ಮಾತು ಕಣ್ಣೀರು ತರಿಸುತ್ತದೆ!

 

ಇತ್ತೀಚಿನ ಸುದ್ದಿ