ಪತಿ ಮಾಡಿದ ಸಾಲಕ್ಕೆ ಪತ್ನಿಯನ್ನು ಠಾಣೆಗೆ ಎಳೆದುತಂದ ಪೊಲೀಸರು: ಅವಮಾನ ತಾಳಲಾರದೆ ಪತ್ನಿ ಆತ್ಮಹತ್ಯೆ - Mahanayaka

ಪತಿ ಮಾಡಿದ ಸಾಲಕ್ಕೆ ಪತ್ನಿಯನ್ನು ಠಾಣೆಗೆ ಎಳೆದುತಂದ ಪೊಲೀಸರು: ಅವಮಾನ ತಾಳಲಾರದೆ ಪತ್ನಿ ಆತ್ಮಹತ್ಯೆ

death
25/02/2022


Provided by

ಬೆಂಗಳೂರು: ಪತಿ ಮಾಡಿದ ಸಾಲಕ್ಕೆ ಪತ್ನಿಯನ್ನು ಠಾಣೆಗೆ ಪೊಲೀಸರು ಕರೆತಂದಿರುವುದರಿಂದ ಅವಮಾನ ತಾಳಲಾರದೆ ಮಹಿಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಮಾರುತಿನಗರದಲ್ಲಿ ಘಟನೆ ನಡೆದಿದೆ. ಅಖಿಲಾ (35) ಮೃತ ಮಹಿಳೆ. ಫ್ರಾಡ್, ಫ್ರಾಡ್ ಅಂತಾ ಸದಾ ಅವಮಾನ ಮಾಡುತ್ತಾರೆ ಎಂದು ಡೆತ್​ ನೋಟ್ ಬರೆದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಖಿಲಾ ಅವರ ಪತಿ ಮಧುಕುಮಾರ್ ಸ್ಥಳೀಯ ನಿವಾಸಿ ಚಂದನ್ ಅಲಿಯಾಸ್ ಚನ್ನಕೇಶವ ಎಂಬಾತನ ಬಳಿ 1 ಲಕ್ಷ ರೂ. ಸಾಲ ಪಡೆದಿದ್ದರು.

ಹಣ ವಾಪಸ್ಸು ನೀಡುವ ವಿಚಾರಕ್ಕೆ ಚಂದನ್ ಕಿರುಕುಳ ನೀಡುತ್ತಿದ್ದ. ಪೊಲೀಸರ ಕಡೆಯಿಂದಲೂ ಕಿರುಕುಳ ಕೊಡಿಸುತ್ತಿದ್ದ ಎಂದು ಅರೋಪಿಸಿದ್ದರು. ಪತಿ ಮನೆಯಲ್ಲಿ ಇರದ ಸಮಯದಲ್ಲಿ ಅಖಿಲಾ ಅವರನ್ನು ಠಾಣೆಗೆ ಕರೆದುಕೊಂಡು ವಿಚಾರಣೆ ನೆಪದಲ್ಲಿ ಟಾರ್ಚರ್ ಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.ಈ ಘಟನೆ ಸಂಬಂಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಇಂದು ರಾತ್ರಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಜೊತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ

ಮೃತ ಹರ್ಷನ ಮೊಬೈಲ್ ಫೋನ್ ಪತ್ತೆಯಾಗಿಲ್ಲ; ಶಿವಮೊಗದಲ್ಲಿ ಎಸ್ ​ಪಿ ಮಾಹಿತಿ

ಉಕ್ರೇನ್‍ ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ರಕ್ಷಣೆಗೆ ರಾಜ್ಯ ಸರ್ಕಾರದಿಂದ ವೆಬ್ ಪೋರ್ಟಲ್ ಪ್ರಾರಂಭ

ಕಾಲೇಜು ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ: ಐವರು ಆರೋಪಿಗಳ ಸೆರೆ

ಪೊಲೀಸ್ ಎಂದು ಹೇಳಿಕೊಂಡು ವರ್ತಕರಿಂದ ಹಣ ವಸೂಲಿ: ಟೀ ಮಾರಾಟಗಾರ ಸೆರೆ

 

ಇತ್ತೀಚಿನ ಸುದ್ದಿ