ಪತಿಯನ್ನು ಮರಕ್ಕೆ ಕಟ್ಟಿ, ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ

rape
25/03/2022

ಲಕ್ನೋ: ಪತಿಯನ್ನು ಮರಕ್ಕೆ ಕಟ್ಟಿ ಹಾಕಿ ಪತಿಯ ಎದುರಲ್ಲಿಯೇ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಮುಜಾಫರ್ ನಗರ ಜಿಲ್ಲೆಯಲ್ಲಿ ನಡೆದಿದೆ.

ದಂಪತಿ ಬುಧವಾರ ರಾತ್ರಿ ತಮ್ಮ ಗ್ರಾಮಕ್ಕೆ ಹಿಂದಿರುಗುವಾಗ ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತ ಕುಟುಂಬ ದಾಖಲಿಸಿರುವ ದೂರಿನ ಪ್ರಕಾರ, ಅತ್ತೆಯ ಮನೆಯಿಂದ ರಾತ್ರಿ ನಡೆದು ಬರುತ್ತಿರುವಾಗ ಎದುರಾದ 10 ಮಂದಿ ಆರೋಪಿಗಳು, ಹತ್ತಿರದಲ್ಲಿದ್ದ ಮಾವಿನ ತೋಟವೊಂದಕ್ಕೆ ಕರೆದೊಯ್ದಿದ್ದು, ಪತಿಯನ್ನು ಮರವೊಂದಕ್ಕೆ ಕಟ್ಟಿ ಹಾಕಿ, ಆತನ ಪತ್ನಿ ಮೇಲೆ ನಾಲ್ವರು ಅತ್ಯಾಚಾರ ನಡೆಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಘಟನೆ ಸಂಬಂಧ ನ್ಯೂ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರು ಅಪ್ರಾಪ್ತರು ಸೇರಿದಂತೆ 10 ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಎಸ್‌ಪಿ ಅರ್ಪಿತ್ ವಿಜಯ್ ವರ್ಗೀಯಾ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಿರ್ಭೂಮ್ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಿದ ಕೋಲ್ಕತ್ತಾ ಹೈಕೋರ್ಟ್

ಅಚ್ಚರಿಯ ಹೇಳಿಕೆ: ಚುನಾವಣಾ ರಾಜಕಾರಣದಿಂದ ನಿವೃತ್ತಿ; ವಿಪಕ್ಷ ನಾಯಕ ಸಿದ್ದರಾಮಯ್ಯ

ಶಾಸಕ ರೇಣುಕಾಚಾರ್ಯ ಪುತ್ರಿಗೆ ಎಸ್‌ಸಿ ಪ್ರಮಾಣ ಪತ್ರ: ಸರಕಾರ ಅವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲಿ; ಸಿದ್ದರಾಮಯ್ಯ

ಅಘಾತಕಾರಿ ಘಟನೆ: ಸರಕು ಸಾಗಣೆ ಹಡಗಿನಿಂದ ನದಿಗೆ ಬಿದ್ದ12 ಟ್ರಕ್‌; 10ಕ್ಕೂ ಹೆಚ್ಚು ಮಂದಿ ಸಾವು

ಇತ್ತೀಚಿನ ಸುದ್ದಿ

Exit mobile version