ಅಮಾನವೀಯ ಘಟನೆ: ಪತ್ನಿಗೆ ನಿದ್ರೆ ಮಾತ್ರೆ ನೀಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿ - Mahanayaka

ಅಮಾನವೀಯ ಘಟನೆ: ಪತ್ನಿಗೆ ನಿದ್ರೆ ಮಾತ್ರೆ ನೀಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿ

chennai
26/09/2021


Provided by

ಚೆನ್ನೈ: ಪತ್ನಿಗೆ ನಿದ್ದೆ ಮಾತ್ರೆ ನೀಡಿದ ಪತಿ, ಆಕೆ ನಿದ್ರೆಗೆ ಜಾರಿದ  ಬಳಿಕ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಘಟನೆ ಚೆನ್ನೈನಲ್ಲಿ ನಡೆದಿದ್ದು, ಪರಿಣಾಮವಾಗಿ ಮಹಿಳೆಯ ಸ್ಥಿತಿಯು ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

28 ವರ್ಷ ವಯಸ್ಸಿನ ಸತ್ಯಮೂರ್ತಿ ಈ ಕೃತ್ಯ ಎಸಗಿದ್ದು, ತನ್ನ ಪತ್ನಿ 24 ವರ್ಷ ವಯಸ್ಸಿನ ದಿವ್ಯಾಗೆ ಬೆಂಕಿ ಹಚ್ಚಿ ಹತ್ಯೆ ನಡೆಸಲು ಯತ್ನಿಸಿದ್ದಾನೆ. ಕೃತ್ಯದ ಬಳಿಕ ತನ್ನ ಮೂರು ವರ್ಷದ ಮಗಳನ್ನು ಕರೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.

ಆರೋಪಿ ಸತ್ಯಮೂರ್ತಿ ತಿರುಪತಿ ಮೂಲದ ವ್ಯಕ್ತಿಯಾಗಿದ್ದ ಎಂದ ಹೇಳಲಾಗಿದೆ. ಕೃತ್ಯದ ಬಳಿಕ ತಲೆಮರೆಸಿಕೊಂಡಿರುವ ಆತ, ವಾಟ್ಸಾಪ್ ನಲ್ಲಿ ಸಂದೇಶವೊಂದನ್ನು ಹರಿಯಬಿಟ್ಟಿದ್ದು, ನನ್ನ ಕಿಡ್ನಿ ಹೋಗಿದೆ. ಹಾಗಾಗಿ ನಾನಿನ್ನು ಬದುಕಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾನೆ.

ಇದಲ್ಲದೇ ತಾನು ಪತ್ನಿ ದಿವ್ಯಾಳನ್ನು ಹತ್ಯೆ ಮಾಡಿ ನಾನು ಕೂಡ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ವಾಯ್ಸ್ ಮೆಸೇಜ್ ಕಳುಹಿಸಿದ್ದಾನೆ ಎಂದು ಹೇಳಲಾಗಿದೆ. ಇನ್ನೂ ತೀವ್ರ ಸುಟ್ಟಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿರುವ ದಿವ್ಯಾ ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಸದ್ಯ ಅವರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಈ ನಡುವೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಸತ್ಯಮೂರ್ತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು

ಭಾರತ ಬಂದ್: ಬೆಂಗಳೂರಿನಲ್ಲಿ ಹೈಅಲಾರ್ಟ್ | ಬಂದ್ ತೀವ್ರ ಸ್ವರೂಪದಲ್ಲಿರುವ ಸಾಧ್ಯತೆ!

ಸಿಎಂ ಬೊಮ್ಮಾಯಿ ಬೆಂಗಾವಲು ವಾಹನ ಕಂಡು ಗಾಬರಿಯಿಂದ ಸ್ಕೂಟಿಯಿಂದ ಬಿದ್ದ ಮಹಿಳೆ!

ಸೊಂಟಕ್ಕೆ ವೇಲ್ ಕಟ್ಟಿಕೊಂಡು ಬೆಟ್ಟದಿಂದ ಹಾರಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ಅಮೆರಿಕಾ ಪ್ರವಾಸ ಮುಗಿಸಿ ಭಾರತಕ್ಕೆ ವಾಪಸ್ ಆದ ಪ್ರಧಾನಿ ನರೇಂದ್ರ ಮೋದಿ

ಪ್ರತಿಭಟನೆ ಹೆಸರಲ್ಲಿ ಜನರಿಗೆ ತೊಂದರೆ ಕೊಡುವುದು ಬೇಡ | ಭಾರತ್ ಬಂದ್ ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

ಅಕ್ಷರಸ್ಥರೇ ಇವತ್ತು ಬುದ್ಧ, ಬಸವ, ಅಂಬೇಡ್ಕರ್ ಅವರಿಗೆ ಮೋಸ ಮಾಡುತ್ತಿದ್ದಾರೆ | ಡಾ.ಎಚ್.ಟಿ. ಪೋತೆ

ಇತ್ತೀಚಿನ ಸುದ್ದಿ