5:46 PM Thursday 16 - October 2025

ಪತ್ನಿಯ ಜೊತೆ ಜಗಳವಾಡಿ ಆತ್ಮಹತ್ಯೆಗೆ ಶರಣಾದ ವಿಜ್ಞಾನಿ

30/01/2021

ಮುಂಬೈ: ಪತ್ನಿಯ ಜೊತೆಗೆ ಜಗಳ ನಡೆದು ವಿಜ್ಞಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ  ನಡೆದಿದ್ದು, ಭಾಭಾ ಪರಮಾಣು ಸಂಶೋಧನಾ ಕೇಂದ್ರದ 37 ವರ್ಷದ ಯುವ ವಿಜ್ಞಾನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಕ್ಕಳಿಗೆ ಊಟ ನೀಡುವ ವಿಚಾರದಲ್ಲಿ ಪತ್ನಿಯೊಂದಿಗೆ ಜಗಳ ನಡೆದಿದ್ದು, ಆ ಬಳಿಕ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನುಜ್ ತ್ರಿಪಾಠಿ ಆತ್ಮಹತ್ಯೆ ಮಾಡಿಕೊಂಡ ವಿಜ್ಞಾನಿಯಾಗಿದ್ದಾರೆ.

ತ್ರಿಪಾಠಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬರುತ್ತಿದ್ದಂತೆಯೇ ಸ್ಥಳೀಯರು  ಆಸ್ಪತ್ರೆಗೆ ಸಾಗಿಸಿದ್ದರು. ಆದರೆ ಅವರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

Exit mobile version