6:15 PM Thursday 16 - October 2025

ಪತಿಯನ್ನು ಕಟ್ಟಿ ಹಾಕಿ ಪತ್ನಿಯ ಮೇಲೆ ಐವರಿಂದ ಸಾಮೂಹಿಕ ಅತ್ಯಾಚಾರ!: ಅಮಾನವೀಯ ಘಟನೆ

punjab
06/06/2022

ಪಾಕಿಸ್ತಾನ: ಮಹಿಳೆಯ ಮನೆಗೆ ನುಗ್ಗಿದ ಐವರು ದುಷ್ಕರ್ಮಿಗಳು ಪತಿಯನ್ನು ಕಟ್ಟಿ ಹಾಕಿ, ಗರ್ಭಿಣಿ ಪತ್ನಿಯನ್ನು ಸಾಮೂಹಿಕ ಅತ್ಯಾಚಾರ ನಡೆಸಿದ ಅಮಾನವೀಯ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಝೇಲಂ ನಗರದಲ್ಲಿ ನಡೆದಿದೆ.

ದುಷ್ಕರ್ಮಿಗಳ ಕೃತ್ಯದಿಂದ ತೀವ್ರವಾಗಿ ಝರ್ಜರಿತವಾಗಿದ್ದ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಮಹಿಳೆ ಆಸ್ಪತ್ರೆ ಸಿಬ್ಬಂದಿಗೆ ನೀಡಿದ ಹೇಳಿಕೆಯಿಂದಾಗಿ ಈ ಘಟನೆ ಬೆಳಕಿಗೆ ಬಂದಿದ್ದು, ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆಕೆಯ ರಕ್ತದ ಮಾದರಿಗಳನ್ನು ಫೋರೆನ್ಸಿಕ್ ಪರೀಕ್ಷೆಗಾಗಿ ಲಾಹೋರ್‌ ಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪಂಜಾಬ್ ಪೊಲೀಸರು ಪ್ರಕರಣದ ತನಿಖೆಗೆ ವಿಶೇಷ ತಂಡ ರಚಿಸಿದ್ದು, ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಕಳೆದ ತಿಂಗಳಷ್ಟೇ ಪಾಕಿಸ್ತಾನದ ಕರಾಚಿಯಲ್ಲಿ ಚಲಿಸುವ ರೈಲಿನಲ್ಲಿ 25 ವರ್ಷದ ಮಹಿಳೆಯನ್ನು ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಇದೀಗ ಮತ್ತೊಂದು ಅತ್ಯಾಚಾರ ನಡೆದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪಠ್ಯಪರಿಷ್ಕರಣೆ ಸಮಿತಿಯಿಂದ ಮತ್ತೊಂದು ಯಡವಟ್ಟು: ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ

ಸೊಸೆಗೆ ಮಕ್ಕಳಾಗುತ್ತಿಲ್ಲ ಎಂದು ತನ್ನಿಬ್ಬರು ಪುತ್ರರಿಂದ ಅತ್ಯಾಚಾರ ನಡೆಸಿದ ಪಾಪಿ ಅತ್ತೆ!

ಮುಖ್ಯಮಂತ್ರಿಯನ್ನು ಭೇಟಿಯಾಗಿ ಮದುವೆಗೆ ಆಹ್ವಾನಿಸಿದ ನಯನತಾರಾ- ಶಿವನ್

ಚಾರ್ಜ್ ಗೆ ಇಟ್ಟಿದ್ದ ಇಲೆಕ್ಟ್ರಿಕ್ ಸ್ಕೂಟರ್ ಬ್ಲಾಸ್ಟ್  

ಇತ್ತೀಚಿನ ಸುದ್ದಿ

Exit mobile version