ಪತಿಗೆ ಪರಸ್ತ್ರಿ ಸಹವಾಸ: ಪತಿ-ಮಹಿಳೆಯ ಬೆತ್ತಲೆ ಮೆರವಣಿಗೆ ನಡೆಸಿದ ಪತ್ನಿ - Mahanayaka

ಪತಿಗೆ ಪರಸ್ತ್ರಿ ಸಹವಾಸ: ಪತಿ-ಮಹಿಳೆಯ ಬೆತ್ತಲೆ ಮೆರವಣಿಗೆ ನಡೆಸಿದ ಪತ್ನಿ

raipura
24/06/2022

ರಾಯ್‌ ಪುರ: ಅಕ್ರಮ ಸಂಬಂಧ ಹೊಂದಿರುವ ಶಂಕೆಯ ಮೇಲೆ ಯುವಕ ಮತ್ತು ಯುವತಿಯನ್ನು ಅರೆಬೆತ್ತಳೆ ಮಾಡಿ ಗ್ರಾಮದಲ್ಲಿ ಮೆರವಣಿಗೆ ಮಾಡಿರುವ ಘಟನೆ ಛತ್ತೀಸ್‌ಗಢದ ಕೊಂಡಗಾಂವ್ ಜಿಲ್ಲೆಯಲ್ಲಿ ನಡೆದಿದೆ.  ಈ ಘಟನೆ ಜೂನ್ 11 ರಂದು ಊರಿಂದಬೇಡ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮದಲ್ಲಿ ನಡೆದಿದೆ.

ಪ್ರಕರಣದಲ್ಲಿಯುವಕನ ಪತ್ನಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತನ್ನ ಗಂಡನನ್ನು ಪರಸ್ತ್ರೀ ಜೊತೆ ಕಾಣಿಸಿಕೊಂಡಿದ್ದಾನೆ ಎಂದು ಪತ್ನಿ ಮನೆಯವರಿಗೆ ಮಾಹಿತಿ ನೀಡಿ ಕರೆಸಿದರು. ನಂತರ ಗ್ರಾಮದ ಮೂಲಕ ಇಬ್ಬರನ್ನು ಬೆತ್ತಳೆಯಾಗಿ ಮೆರವಣಿಗೆ ಮಾಡಲಾಗಿದೆ.

ಈ ವೇಳೆ ಅವರ ಬಟ್ಟೆಗಳನ್ನು ಬಲವಂತವಾಗಿ ತೆಗೆದಿದ್ದು ಸಂತ್ರಸ್ತೆಯ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿಕೊಂಡು ಯುವಕನ ಪತ್ನಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.  ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಒಳ ಉಡುಪಿನಲ್ಲಿ ಚಿನ್ನ ಸಾಗಾಗಿಸುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ

ಒಂದೇ ಮಳೆಗೆ ಕಿತ್ತು ಹೋದ ಪ್ರಧಾನಿಯನ್ನು ಸ್ವಾಗತಿಸಿದ್ದ ಹೊಸ ರಸ್ತೆಗಳು!

ಬಾಳು ಕೊಡುತ್ತೇನೆಂದು ಮಹಿಳೆಯನ್ನು ಕರೆದೊಯ್ದ ಅರ್ಚಕ, ಕಾಡಿನಲ್ಲಿ ಬಿಟ್ಟು ಹೋದ!

ಬಾಳು ಕೊಡುತ್ತೇನೆಂದು ಮಹಿಳೆಯನ್ನು ಕರೆದೊಯ್ದ ಅರ್ಚಕ, ಕಾಡಿನಲ್ಲಿ ಬಿಟ್ಟು ಹೋದ!

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ