ಆಯುರ್ವೇದಿಕ್ ಕ್ಲಿನಿಕ್ ನಡೆಸುತ್ತಿದ್ದ ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ರೋಗಿ!

ಚೆನ್ನೈ: ಮನೆಯಲ್ಲೇ ಆಯುರ್ವೇದಿಕ್ ಕ್ಲಿನಿಕ್ ನಡೆಸುತ್ತಿದ್ದ ದಂಪತಿಯನ್ನು ವ್ಯಕ್ತಿಯೋರ್ವ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಚೆನ್ನೈನ ಗಾಂಧಿನಗರದ, ಮಿಟ್ಟನಮಲ್ಲಿಯಲ್ಲಿ ನಡೆದಿದೆ.
ಶಿವನ್ ನಾಯರ್ (72) ಮತ್ತು ಪ್ರಸನ್ನ ಕುಮಾರಿ (62) ಹತ್ಯೆಗೀಡಾದವರಾಗಿದ್ದು, ಇವರ ಕ್ಲಿನಿಕ್ ಗೆ ಔಷಧಿಗಾಗಿ ಬಂದಿದ್ದ ಮಾಗೇಶ್ ಎಂಬಾತ ಈ ಕೃತ್ಯ ಎಸಗಿದ್ದಾನೆ.
ಆರೋಪಿ ಮಾಗೇಶ್ 2019ರಿಂದ ದಂಪತಿ ನಡೆಸುತ್ತಿದ್ದ ಕ್ಲಿನಿಕ್ ನಿಂದ ಔಷಧಿ ಪಡೆದುಕೊಳ್ಳುತ್ತಿದ್ದ. ಕ್ಲಿನಿಕ್ ನ ಸಮಯ ಬಿಟ್ಟು ಬೇರೆ ಸಮಯದಲ್ಲಿ ಬಂದು ಔಷಧಿ ಕೇಳಿದ ವಿಚಾರಕ್ಕೆ ಇವರ ನಡುವೆ ಜಗಳ ನಡೆದಿದೆ ಎಂದು ಹೇಳಲಾಗಿದೆ. ಈ ವೇಳೆ ಕೋಪಗೊಂಡು ಮಾಗೇಶ್ ದಂಪತಿಯನ್ನು ಹತ್ಯೆ ಮಾಡಿದ್ದಾನೆ.
ಕೃತ್ಯದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದ. ಸಿಸಿ ಟಿವಿ ದೃಶ್ಯಾವಳಿಗಳ ಆಧಾರದಲ್ಲಿ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನೂ ದಂಪತಿ ತನಗೆ ಸಾರ್ವಜನಿಕರ ಎದುರು ಪದೇ ಪದೇ ಅವಮಾನಿಸುತ್ತಿದ್ದರು. ಇದರಿಂದ ಬೇಸತ್ತು ಅವರನ್ನು ಹತ್ಯೆ ಮಾಡಿರುವುದಾಗಿ ಮಾಗೇಶ್ ಹೇಳಿದ್ದಾನೆ ಎಂದು ತಿಳಿದು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth