ಪಾಠ ಕೇಳುತ್ತಿದ್ದ ವಿದ್ಯಾರ್ಥಿನಿಯರ ತಲೆ ಮೇಲೆ ಬಿದ್ದ ಶಾಲೆಯ ಮೇಲ್ಛಾವಣಿ: ಶಿಕ್ಷಣ ಇಲಾಖೆ ನಿರ್ಲಕ್ಷ್ಯ
ಕಲಬುರಗಿ: ಭಾರೀ ಮಳೆಗೆ ಮಾದನಹಿಪ್ಪರಗಾ ಗ್ರಾಮದಲ್ಲಿನ ಕರ್ನಾಟಕ ಪಬ್ಲಿಕ್ ಕಾಲೇಜಿನ ಮೇಲ್ಛಾವಣಿ ಕುಸಿದು ವಿದ್ಯಾರ್ಥಿನಿಯರು ಗಾಯಗೊಂಡ ಘಟನೆ ನಡೆದಿದ್ದು, ಶಿಕ್ಷಣ ಇಲಾಖೆ ನಿರ್ಲಕ್ಷ್ಯದ ವಿರುದ್ಧ ವ್ಯಾಪಕ ಆಕ್ರೋಶ ಕೇಳಿ ಬಂದಿದೆ.
ಪಾಠ ಕೇಳುತ್ತಿದ್ದ ಮೂವರು ವಿದ್ಯಾರ್ಥಿನಿಯರ ತಲೆಗೆ ಮೇಲ್ಛಾವಣಿಯ ಅವಶೇಷಗಳು ಬಿದ್ದಿದ್ದು, ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳು ವಿದ್ಯಾರ್ಥಿನಿಯರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಕ್ಕಳು ಗಾಯಗೊಂಡಿದ್ದರಿಂದ ಆತಂಕೊಳಗಾದ ಪೋಷಕರು ಆಸ್ಪತ್ರೆಗೆ ಧಾವಿಸಿದ್ದಾರೆ.
ಶಿಥಿಲಾವಸ್ಥೆಯಲ್ಲಿರುವ ಶಾಲೆಗಳನ್ನು ಸರಿಪಡಿಸದೇ ಶಿಕ್ಷಣ ಇಲಾಖೆ ನಿರ್ಲಕ್ಷ್ಯವಹಿಸುತ್ತಿದ್ದು, ಬಡವರ ಮನೆಯ ಮಕ್ಕಳ ಪ್ರಾಣದ ಜೊತೆಗೆ ಚೆಲ್ಲಾಟವಾಡುತ್ತಿದೆ ಎಂಬ ಆಕ್ರೋಶ ಕೇಳಿ ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

























