ಪಟಾಕಿ ತಯಾರಿಕೆ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ: ಐವರು ಸಾವು
ಬಿಹಾರ: ಪಟಾಕಿ ತಯಾರಿಕೆ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ ಸಂಭವಿಸಿದ ಪರಿಣಾಮ ಐವರು ಮೃತಪಟ್ಟಿದ್ದು, ನಾಲ್ಕಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ.
ಕಾರ್ಖಾನೆ ಮಾಲೀಕ ಶಬೀರ್ ಹುಸೇನ್(22), ಮುಲಾಜಿಮ್(35), ಶಬಾನಾ ಖಾತೂನ್(32), ಶಾಜಾದ್(5) ಸೇರಿ ಐವರು ಮೃತಪಟ್ಟಿದ್ದಾರೆ.
ಭಾನುವಾರ ರಾತ್ರಿ ಬಿಹಾರದ ಸರನ್ ಜಿಲ್ಲೆಯ ಖೋಡೈಬಾಗ್ ಬಜಾರ್ ನಲ್ಲಿ ಈ ದುರಂತ ಸಂಭವಿಸಿದ್ದು, ಈ ಸ್ಥಳದಲ್ಲಿ ಅಕ್ರಮವಾಗಿ ಪಟಾಕಿ ತಯಾರಿಸಲಾಗುತ್ತಿತ್ತು ಎಂದು ಹೇಳಲಾಗಿದೆ.
ಸ್ಫೋಟದ ತೀವ್ರತೆಗೆ ಮೂರಂತಸ್ತಿನ ಕಟ್ಟದ ಕುಸಿದಿದ್ದು, ವ್ಯಕ್ತಿಯೊಬ್ಬರ ದೇಹದ ಭಾಗ ಸುಮಾರು 50 ಮೀಟರ್ ದೂರದಲ್ಲಿ ತೂರಿ ಬಿದ್ದಿದೆ. ಇನ್ನೂ ನಾಲ್ವರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಎಂದು ವರದಿಯಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

























