ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ನಿರ್ಧಾರ ಕೊರೊನಾ ಮಹಾಮಾರಿಗಿಂತಲೂ ಮಾರಕ: ತನ್ವೀರ್‌ ಸೇಠ್‌ - Mahanayaka
1:43 AM Wednesday 15 - October 2025

ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ನಿರ್ಧಾರ ಕೊರೊನಾ ಮಹಾಮಾರಿಗಿಂತಲೂ ಮಾರಕ: ತನ್ವೀರ್‌ ಸೇಠ್‌

tanveer-sait
20/03/2022

ಮೈಸೂರು: ರಾಜ್ಯ ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆ ನಿರ್ಧಾರ ಕೊರೊನಾ ಮಹಾಮಾರಿಗಿಂತಲೂ ಮಾರಕ ಎಂದು ಮಾಜಿ ಶಿಕ್ಷಣ ಸಚಿವ, ಶಾಸಕ ತನ್ವೀರ್‌ ಸೇಠ್ ಹೇಳಿದ್ದಾರೆ.


Provided by

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆಯಂತಹ ನಿರ್ಧಾರಗಳಿಂದ ಮಕ್ಕಳು ಶೈಕ್ಷಣಿಕವಾಗಿ ಕುಂಠಿತರಾಗುತ್ತಾರೆ ಚುನಾವಣೆ ವೇಳೆ ರಾಜಕಾರಣ ಮಾಡೋದು ಸರಿ. ಅಧಿಕಾರ ಬಂದ ಮೇಲೆ ಜಾತ್ಯಾತೀತವಾಗಿ ನಡೆದುಕೊಳ್ಳುಬೇಕು. ಶಿಕ್ಷಣ ಬಿಟ್ಟು ಸರ್ಕಾರ ಅನ್ಯ ವಿಚಾರಗಳ ಬಗ್ಗೆ ಗಮನಹರಿಸಬಾರದು ಎಂದರು.

ಈಗಾಗಲೇ ಕೊರೊನಾದಿಂದ ಎರಡು ವರ್ಷ ಮಕ್ಕಳಿಗೆ ಶಿಕ್ಷಣ ಸಿಕ್ಕಿಲ್ಲ. ಶಾಲೆಯಲ್ಲಿ ಸಮಾನತೆ ಕಾಪಾಡಿಕೊಳ್ಳಬೇಕು. ನ್ಯಾಯಾಲಯದ ತೀರ್ಪು ಸಹ ಸ್ಪಷ್ಟವಾಗಿ ಇದನ್ನೇ ಹೇಳಿದೆ‌. ಸರ್ಕಾರ ಸಹ ಮತಾಂತರ ಕಾಯಿದೆಯಲ್ಲಿ ಬಲವಂತದ ಮತಾಂತರ ಅಪರಾಧ ಅಂತ ಹೇಳಿಕೆ ನೀಡಿದೆ. ಇದೀಗ ಶಿಕ್ಷಣದಲ್ಲಿ ಧರ್ಮದ ವಿಚಾರ ಅಳವಡಿಸುವ ಮೂಲಕ ನಿಯಮ ಉಲ್ಲಂಘನೆ ಮಾಡ್ತಿದೆ. ಭಗವದ್ಗೀತೆ ಅಳವಡಿಸುವುದರಿಂದ ಏನಾಗುತ್ತೆ, ಏನಾಗಲ್ಲ ಅನ್ನೊದು ಪ್ರಶ್ನೆ ಅಲ್ಲ. ಮಕ್ಕಳ ಶಿಕ್ಷಣ ವ್ಯವಸ್ಥೆಗೆ ಇದು ಬೇಡ ಎಂದು ಅವರು ಹೇಳಿದರು.

ಹಿಜಾಬ್​ ವಿವಾದಿಂದ ಪರೀಕ್ಷೆಯಿಂದ ವಂಚಿತರಾಗಿರುವ ವಿದ್ಯಾರ್ಥಿಗಳು ಮತ್ತೆ ಪರೀಕ್ಷೆ ಬರೆಯುವ ಕುರಿತು ಮಾತನಾಡಿ, ಇದಕ್ಕಾಗಿಯೇ ಕಾನೂನು ಅಂತ ಇದೆ. ವೈಯಕ್ತಿಕ ಕಾರಣಗಳಿಗೆ ಪರೀಕ್ಷೆಗೆ ತಪ್ಪಿಸಿಕೊಂಡರೆ ಪರೀಕ್ಷೆ ಕೊಡಲು ಸಾಧ್ಯವಿಲ್ಲ. ಆದರೆ ಈ ವಿಚಾರವೇ ಬೇರೆ. ಹೀಗಾಗಿ ಸರ್ಕಾರ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತೆ. ಹಿಜಾಬ್ ಬೇಡಿಕೆಗಾಗಿ ಎಲ್ಲೂ ಪ್ರತಿಭಟನೆ ಮಾಡುತ್ತಿಲ್ಲ. ಸ್ವಯಂ ಪ್ರೇರಿತರಾಗಿ ಹಲವು ಕಡೆ ಬಂದ್ ಮಾಡಲಾಗಿತ್ತು. ಅದು ಯಶಸ್ವಿಯೂ ಆಗಿದೆ ಹಾಗೂ ಸರ್ಕಾರದ ಗಮನ ಸೆಳೆದಿದೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರಂಗಭೂಮಿ ಕಲಾವಿದೆ ಮೇಲೆ ಆ್ಯಸಿಡ್ ದಾಳಿ: ಆರೋಪಿಗಳ ಬಂಧನ

ರಮೇಶ್ ಜಾರಕಿಹೊಳಿ ಮೇಲೆ ಇರುವ ಸಿಡಿ ಪ್ರಕರಣ ಕ್ಲಿಯರ್‌ ಆಗುತ್ತೆ: ಬಾಲಚಂದ್ರ ಜಾರಕಿಹೊಳಿ ವಿಶ್ವಾಸ

ಕರಾವಳಿ ಕಾಲೇಜ್ ವಿದ್ಯಾರ್ಥಿ ಭರತ್ ಭಾಸ್ಕರ್ ಆತ್ಮಹತ್ಯೆ: ಸೂಕ್ತ ಕ್ರಮಕ್ಕೆ ಒತ್ತಾಯ

102 ವರ್ಷದ ಮಾಜಿ ಶಿಕ್ಷಕನಿಗೆ 15 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಕೋರ್ಟ್!

ಇತ್ತೀಚಿನ ಸುದ್ದಿ