ಪಾವಗಡ ಅಪಘಾತ ಪ್ರಕರಣ: ಸೂಕ್ತ ಚಿಕಿತ್ಸೆ ಸಿಗದೇ ಪರದಾಡುತ್ತಿರುವ ಸಂತ್ರಸ್ತರು! - Mahanayaka
10:32 AM Saturday 23 - August 2025

ಪಾವಗಡ ಅಪಘಾತ ಪ್ರಕರಣ: ಸೂಕ್ತ ಚಿಕಿತ್ಸೆ ಸಿಗದೇ ಪರದಾಡುತ್ತಿರುವ ಸಂತ್ರಸ್ತರು!

pavagada
23/03/2022


Provided by

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿಯಲ್ಲಿ ನಡೆದ ಭೀಕರ ಬಸ್ ಅಪಘಾತ ಪ್ರಕರಣದಲ್ಲಿ ಗಾಯಗೊಂಡವರು ಚಿಕಿತ್ಸೆಗಾಗಿ ಪರದಾಡುತ್ತಿರುವ ಘಟನೆ ನಡೆದಿದ್ದು,  ಗಾಯಾಳುಗಳನ್ನು ಆಸ್ಪತ್ರೆಯಲ್ಲಿ ನಿರ್ಲಕ್ಷಿಸಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ.

ಅಪಘಾತದ ಗಾಯಾಳುಗಳಿಗೆ ಸರ್ಕಾರ ತನ್ನ ವೆಚ್ಚದಲ್ಲೇ ಚಿಕಿತ್ಸೆ ನೀಡುವುದಾಗಿ ಸರ್ಕಾರ ಹೇಳಿಕೊಂಡಿತ್ತು. ಆದರೆ, ಗಂಭೀರ ಗಾಯದ ಸ್ಥಿತಿಯಲ್ಲಿರುವ ರೋಗಿಗಳನ್ನು ಡಿಸ್ಚಾರ್ಜ್ ಆಗಿ ಎಂದು ವೈದ್ಯರು ಹೇಳುತ್ತಿದ್ದಾರೆ ಎನ್ನುವ ಆರೋಪ  ಕೇಳಿ ಬಂದಿದೆ.

ಗೃಹ ಸಚಿವರು, ಆರೋಗ್ಯ ಸಚಿವರು, ಸಾರಿಗೆ ಸಚಿವರು  ಹೀಗೆ ಸರ್ಕಾರದಿಂದ ಸಚಿವರ ದಂಡೇ ಆಸ್ಪತ್ರೆಗೆ ಬಂದಿದ್ದರೂ ಸಹ, ಯಾವುದೇ ಪ್ರಯೋಜನವಾಗುತ್ತಿಲ್ಲ. ಮಂತ್ರಿಗಳು, ಎಂಎಲ್ ಎಗಳು ಬಂದಾಗ ಮಾತ್ರ ನಮಗೆ ಚಿಕಿತ್ಸೆ ನೀಡುತ್ತಿದ್ದಾರೆ. ನಾವು ಔಷಧಿಗಳನ್ನು ಹೊರಗಿನಿಂದ ತರುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಗಾಯಾಳುಗಳು ಅಳವತ್ತುಕೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕಸ ಸಾಗಾಟದ ವಾಹನ ಚಾಲಕನ ಮೇಲೆ ಗೋರಕ್ಷಕರಿಂದ ಮಾರಣಾಂತಿಕ ಹಲ್ಲೆ

ಮುಗಿಯಿತೇ ಮಾಧ್ಯಮ ಬಹಿಷ್ಕಾರ ಅಭಿಯಾನ?

ಟಿಎಂಸಿ ಮುಖಂಡನ ಕೊಲೆಗೆ ಪ್ರತಿಕಾರ: ಮನೆಗೆ ಬೆಂಕಿ ಹಚ್ಚಿ 10 ಜನರನ್ನು ಕೊಂದ ಪಾಪಿಗಳು

ಬೈಕ್-ಇನೋವಾ ಕಾರ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಾಯ

ಚೀನಾ ವಿಮಾನ ದುರಂತ: 133 ಮಂದಿ ಸಾವು ಸಾಧ್ಯತೆ

ಇತ್ತೀಚಿನ ಸುದ್ದಿ