ಪಿಡಿಓ ಲೋಕಾಯುಕ್ತ ಬಲೆಗೆ: ಬಸವ ವಸತಿ ಯೋಜನೆಯ ಫಲಾನುಭವಿಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಡಿಓ

13/12/2023
ಉಡುಪಿ: ಬಸವ ವಸತಿ ಯೋಜನೆಯ ಫಲಾನುಭವಿಗಳ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬೇಳೂರು ಪಿಡಿಓ ಜಯಂತ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಬಸವ ವಸತಿ ಯೋಜನೆಯ ಹಣ ಮಂಜೂರು ಮಾಡಬೇಕಾದರೆ 10 ಸಾವಿರ ರೂಪಾಯಿ ತನಗೆ ನೀಡುವಂತೆ ಜಯಂತ್ ಫಲಾನುಭವಿಗಳ ಬಳಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು.
ಈ ಬಗ್ಗೆ ನೊಂದ ಫಲಾನುಭವಿಯೊಬ್ಬರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಅಂತೆಯೇ ತೆಕ್ಕಟ್ಟೆ ಜಂಕ್ಷನ್ ಬಳಿಯಲ್ಲಿ ದೂರುದಾರರಿಂದ 10 ಸಾವಿರ ಲಂಚ ಪಡೆಯುತ್ತಿದ್ದ ಸಮಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸದ್ಯ ಜಯಂತ್ ವಿರುದ್ಧ ಪ್ರಕರಣ ದಾಖಲಾಗಿದೆ.