ನವಿಲಿಗೆ ಬಸ್ ಡಿಕ್ಕಿ: ಬಸ್ ನ ಗಾಜು ಪುಡಿ ಪುಡಿ, ನವಿಲು ಸಾವು

12/07/2025
ಚಿಕ್ಕಮಗಳೂರು: KSRTC ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ನವಿಲು ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಮಚ್ಚೇರಿ ಬಳಿ ನಡೆದಿದೆ.
ಬಸ್ ಕಡೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು, ಈ ವೇಳೆ ಬಸ್ ಗೆ ಅಡ್ಡಲಾಗಿ ನವಿಲು ಹಾರಿದ ವೇಳೆ ಬಸ್ ನವಿಲಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಬಸ್ಸಿನ ಗಾಜು ಪುಡಿ ಪುಡಿಯಾಗಿದ್ದು, ನವಿಲು ಸ್ಥಳದಲ್ಲೇ ಸಾವನ್ನಪ್ಪಿದೆ.
ನವಿಲನ್ನು ಕಂಡ ತಕ್ಷಣವೇ ಬಸ್ ಚಾಲಕ ಬಸ್ ನಿಲ್ಲಿಸಿದದಾರೆ. ಆದರೆ ಬಸ್ ನ ಗಾಜಿಗೆ ಡಿಕ್ಕಿ ಹೊಡೆದು ನವಿಲು ಮೃತಪಟ್ಟಿದೆ. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: