10:26 AM Saturday 23 - August 2025

ಡಿ.ಕೆ.ಶಿವಕುಮಾರ್ ಮನೆಯಲ್ಲೇ ಪೆನ್ ಡ್ರೈವ್ ಟ್ರಾನ್ಸ್ ಫರ್ ನಡೆದಿದೆ: ಕುಮಾರಸ್ವಾಮಿ ಆರೋಪ

HD Kumaraswamy
22/05/2024

ಬೆಂಗಳೂರು : ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಯಲ್ಲೇ ಪೆನ್ ಡ್ರೈವ್ ಟ್ರಾನ್ಸ್ ಫರ್ ನಡೆದಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಸರಿಯಾದ ತನಿಖೆ ನಡೆಸದೇ ಇದ್ರೆ ಕಾನೂನು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪೆನ್‌ ಡ್ರೈವ್‌ ಪ್ರಕರಣದಲ್ಲಿ ಡಿ.ಕೆ.ಬ್ರದರ್ಸ್ ಕೈವಾಡ ಇದೆ. ಹಾಸನದ ಕಾಂಗ್ರೆಸ್ ಅಭ್ಯರ್ಥಿ ಹೊಳೆನರಸೀಪುರದಲ್ಲಿ ಒಬ್ಬ ವ್ಯಕ್ತಿಯನ್ನು ಕರೆದುಕೊಂಡು ಡಿ.ಕೆ.ಸುರೇಶ್, ಡಿ.ಕೆ. ಶಿವಕುಮಾರ್ ಬಳಿ ಹೋಗಿದ್ದಾನೆ. ಈ ವೇಳೆಯೇ ಡಿ.ಕೆ. ಶಿವಕುಮಾರ್‌ ಮನೆಯಲ್ಲೇ ಪೆನ್‌ ಡ್ರೈವ್‌ ಟ್ರಾನ್ಸ್‌ ಫರ್‌ ನಡೆದಿದೆ ಎಂದು ಅವರು ಆರೋಪಿಸಿದರು.

ನಾನು ಪ್ರಜ್ವಲ್ ಪರವಾಗಿ ಇಲ್ಲ. ಆತನ ಅಪರಾಧ ಸಾಬೀತಾದರೆ ಶಿಕ್ಷೆ ಕೊಡಿ. ಈ ಬಗ್ಗೆ ಪಾರದರ್ಶಕವಾಗಿ ತನಿಖೆ ನಡೆಸಿ. ದೇವರಾಜೇಗೌಡ, ಶಿವರಾಮೇಗೌಡ, ಡಿ.ಕೆ.ಶಿವಕುಮಾರ್ ಪೆನ್ ಡ್ರೈವ್ ವಿತರಣೆ ಹಿಂದೆ ಇದ್ದಾರೆ. ಪೆನ್‌ ಡ್ರೈವ್‌ ಪ್ರಕರಣದಲ್ಲಿ ಡಿ.ಕೆ. ಬ್ರದರ್ಸ್ ಕೈವಾಡ ಇದೆ ಎಂದು ಅವರು ಗಂಭೀರ ಆರೋಪ ಮಾಡಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ

Exit mobile version