5:29 PM Wednesday 27 - August 2025

ಬೊಮ್ಮಾಯಿ ಅವರ ಧಮ್ಮು ತಾಕತ್ತಿಗೆ ಜನ ಈಗಾಗಲೇ ಉತ್ತರ ನೀಡಿದ್ದಾರೆ: ಡಿಸಿಎಂ‌ ಅಧ್ಯಕ್ಷ ಡಿ.ಕೆ. ಶಿವಕುಮಾರ್

dk shivakumar
20/06/2023

ಬೊಮ್ಮಾಯಿ ಅವರ ಧಮ್ಮು ತಾಕತ್ತಿಗೆ ಜನ ಈಗಾಗಲೇ ಉತ್ತರ ನೀಡಿದ್ದಾರೆ ಎಂದು ಡಿಸಿಎಂ‌ ಅಧ್ಯಕ್ಷ  ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ತಿರುಗೇಟು ನೀಡಿದ್ದಾರೆ.ವಿಧಾನಸೌಧದಲ್ಲಿ ಡಿಸಿಎಂ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಧ್ಯಮ ಪ್ರತಿಕ್ರಿಯೆ ನೀಡಿದ ಅವರು,ನಾವು ರಾಜ್ಯದ ಜನರಿಗೆ ಐದು ಗ್ಯಾರಂಟಿ ನೀಡಿದ್ದು, ಅದರಲ್ಲಿ ಅನ್ನಭಾಗ್ಯ ಯೋಜನೆ ಮೂಲಕ 10 ಕೆ.ಜಿ ಅಕ್ಕಿ ನೀಡುವುದಾಗಿ ವಾಗ್ದಾನ ನೀಡಿದ್ದೇವೆ ಎಂದರು.

ಹೆಚ್ಚುವರಿ 5 ಕೆ.ಜಿ ಅಕ್ಕಿ ಖರೀದಿಗೆ ಭಾರತೀಯ ಆಹಾರ ನಿಗಮ ಆರಂಭದಲ್ಲಿ ಒಪ್ಪಿಗೆ ನೀಡಿತ್ತು. ಆದರೆ ರಾಜಕೀಯ ಉದ್ದೇಶದಿಂದ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ವಿಫಲಗೊಳಿಸಲು ಇದೀಗ ಅಕ್ಕಿ ನೀಡಲು ನಿರಾಕರಿಸಿದ್ದಾರೆ

ಆ ಮೂಲಕ ರಾಜ್ಯದ ಬಡವರಿಗೆ ಬಿಜೆಪಿಯ ಕೇಂದ್ರ ಸರ್ಕಾರ ಮೋಸ ಮಾಡಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರದಿದ್ದರೆ ಕೇಂದ್ರದ ಯೋಜನೆ ಕಟ್ ಮಾಡುತ್ತೇವೆ ಎಂದು ನಡ್ದಾ ಅವರು ಹೇಳಿದ್ದರು. ಈಗ ಅವರು ಹೇಳಿದಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಡಿಕೆಶಿ ಹೇಳಿದರು.

ಕೇಂದ್ರ ಅಕ್ಕಿ ನೀಡದಿದ್ದರೂ ನಾವು ಬೇರೆ ರಾಜ್ಯಗಳ ಜತೆ ಮಾತನಾಡಿ ಅಲ್ಲಿಂದ ಅಕ್ಕಿ ಖರೀದಿ ಮಾಡುತ್ತೇವೆ. ಸ್ವಲ್ಪ ತಡವಾದರೂ ನಾವು ನಮ್ಮ ಯೋಜನೆ ಜಾರಿ ಮಾಡಿಯೇ ಮಾಡುತ್ತೇವೆ.

ನಾವು ಈ ಯೋಜನೆಯಲ್ಲಿ ಕೇವಲ ಒಂದು ಪಕ್ಷದವರಿಗೆ ಮಾತ್ರ ಅಕ್ಕಿ ನೀಡುತ್ತಿಲ್ಲ. ಸರ್ವರಿಗೂ ಸಮಬಾಳು ಸಮಪಾಲು ಎಂಬಂತೆ ಪಕ್ಷ, ಧರ್ಮ ಭೇದವಿಲ್ಲದೆ ಎಲ್ಲರಿಗೂ ನೀಡುತ್ತಿದ್ದೇವೆ. ಒಂದು ವೇಳೆ ಕೇಂದ್ರ ಸರ್ಕಾರ ಸಹಕಾರ ನೀಡಿದ್ದರೆ ಜನರ ಹೊಟ್ಟೆ ತುಂಬುತ್ತಿತ್ತು. ಅಕ್ಕಿ ನೀಡುವುದು ನಮ್ಮ ಜವಾಬ್ದಾರಿ. ಪಾರದರ್ಶಕವಾಗಿ ಅಕ್ಕಿ ಖರೀದಿ ಮಾಡಿ ಜನರಿಗೆ ನೀಡುತ್ತೇವೆಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

 

ಇತ್ತೀಚಿನ ಸುದ್ದಿ

Exit mobile version