ಪ್ರಧಾನಿ ಮೋದಿಯವರಿಗೆ ಬೀಳ್ಕೊಡುಗೆ ನೀಡಲು ದೇಶದ ಜನ ತಯಾರಾಗಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

mallikarjun kharge
15/05/2024

ಲಖನೌ: ಪ್ರಧಾನಿ ನರೇಂದ್ರ ಮೋದಿಯವರಿಗೆ ಬೀಳ್ಕೊಡುಗೆ ನೀಡಲು ದೇಶದ ಜನರು ತಯಾರಾಗಿದ್ದು, ಇಂಡಿಯಾ ಒಕ್ಕೂಟವು ಸರ್ಕಾರ ರಚಿಸಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಈ ಚುನಾವಣೆ ಸಂವಿಧಾನದ ರಕ್ಷಣೆಗೆ ನಡೆಯುತ್ತಿದೆ ಎಂದು ಹೇಳಿದ ಅವರು, ಸಂವಿಧಾನ ಬದಲಾಯಿಸುತ್ತೇನೆ ಎಂದು ಹೇಳಿದವರ ವಿರುದ್ಧ ಪ್ರಧಾನಿ ಯಾಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಇದೇ ವೇಳೆ ಪ್ರಶ್ನಿಸಿದ್ದಾರೆ.

ದೇಶದಲ್ಲಿ ನಾಲ್ಕು ಹಂತದ ಚುನಾವಣೆ ಮುಗಿದಿದೆ. ಇಂಡಿಯಾ ಒಕ್ಕೂಟವು ಭದ್ರ ಸ್ಥಾನದಲ್ಲಿದೆ. ನರೇಂದ್ರ ಮೋದಿಯವರಿಗೆ ಬೀಳ್ಕೊಡಲು ದೇಶದ ಜನ ಕಾಯುತ್ತಿದ್ದಾರೆ ಎನ್ನುವ ಆತ್ಮವಿಶ್ವಾಸ ಇದೆ. ಜೂನ್ 4ರಂದು ಇಂಡಿಯಾ ಒಕ್ಕೂಟವು ಸರ್ಕಾರ ರಚನೆ ಮಾಡಲಿದೆ ಎಂದು ಖರ್ಗೆ ವಿಶ್ವಾಸ ವ್ಯಕ್ತಪಡಿಸಿದರು.

ಇವರು ಸಂವಿಧಾನವನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾರೆ. ಸಂವಿಧಾನವನ್ನು ಬದಲಾಯಿಸಲು ನಾಲ್ಕನೇ ಮೂರು ಬಹುಮತ ಬೇಕು ಎಂದು ಆರ್‌ ಎಸ್‌ ಎಸ್‌ ನಾಯಕ ಮೋಹನ್ ಭಾಗವತ್ ಕರ್ನಾಟಕದಲ್ಲಿ ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ ಹಲವು ಮಂದಿ ಬಿಜೆಪಿ ನಾಯಕರು ಸಂವಿಧಾನವನ್ನು ಬದಲಾಯಿಸುವ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಮೋದಿ ಯಾಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ

Exit mobile version