ಕಾರಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗಳನ್ನು ಅಡ್ಡಗಟ್ಟಿ ಹಲ್ಲೆ - Mahanayaka

ಕಾರಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗಳನ್ನು ಅಡ್ಡಗಟ್ಟಿ ಹಲ್ಲೆ

kamballa bettu
03/06/2023


Provided by

ಕಾರಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗಳನ್ನು ತಂಡವೊಂದು ಅಡ್ಡಗಟ್ಟಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಂಬಳಬೆಟ್ಟುವಿನಲ್ಲಿ ನಡೆದಿದೆ.

ಮುಹಮ್ಮದ್ ಸರ್ವನ್ ಹಾಗೂ ಫಾರೂಕ್ ಹಲ್ಲೆಗೊಳಗಾದವರು. ಕಂಬಳಬೆಟ್ಟು ಉರಿಮಜಲು ನಿವಾಸಿಗಳಾದ ಜಸೀಲ್, ಯೂಸುಫ್, ಝಿಯಾದ್, ಉಸ್ಮಾನ್, ಶರೀಫ್ ಹಾಗೂ ಇತರ ಮೂವರು ಆರೋಪಿಗಳು ಸೇರಿ ಹಲ್ಲೆ ಮಾಡಿರುವುದಾಗಿ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ಕಂಬಳಬೆಟ್ಟುವಿನಲ್ಲಿ ಅಕ್ರಮ ಕೂಟ ಸೇರಿಕೊಂಡು ಮುಹಮ್ಮದ್ ಸರ್ವನ್ ಅವರನ್ನು ಕಾರಿನಿಂದ ಕೆಳಗೆ ಎಳೆದು ಹಾಕಿದ ಆರೋಪಿಗಳು ಕೈಯಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ತಡೆಯಲೆತ್ನಿಸಿದ ಫಾರೂಕ್ ಅವರಿಗೆ ಮರದ ದೊಣ್ಣೆಯಿಂದ ಹೊಡೆದಿದ್ದಾರೆ.

ಬಳಿಕ ನಮ್ಮ ತಂಟೆಗೆ ಬಂದರೆ ಜೀವ ಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ವಿಟ್ಲ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಗಾಯಾಳು ಮುಹಮ್ಮದ್ ಸರ್ವನ್ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದರೆ, ಫಾರೂಕ್ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ