ರಾತ್ರಿ ಮದ್ಯ ಸೇವಿಸಿದ ವ್ಯಕ್ತಿ ಬೆಳಗ್ಗೆ ಸಾವು: ಬಾರ್ ಮುಂದೆ ಮೃತದೇಹ ಇಟ್ಟು ಸ್ಥಳೀಯರಿಂದ ಪ್ರತಿಭಟನೆ - Mahanayaka

ರಾತ್ರಿ ಮದ್ಯ ಸೇವಿಸಿದ ವ್ಯಕ್ತಿ ಬೆಳಗ್ಗೆ ಸಾವು: ಬಾರ್ ಮುಂದೆ ಮೃತದೇಹ ಇಟ್ಟು ಸ್ಥಳೀಯರಿಂದ ಪ್ರತಿಭಟನೆ

tharikere
04/01/2023


Provided by

ಚಿಕ್ಕಮಗಳೂರು: ರಾತ್ರಿ ಮದ್ಯ ಸೇವಿಸಿದ್ದ ವ್ಯಕ್ತಿಯೊಬ್ಬರು ಬೆಳಗ್ಗೆ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕರಕುಚ್ಚಿ ಕಾಲೋನಿಯಲ್ಲಿ ನಡೆದಿದೆ.

ಮಂಜುನಾಥ್(29) ಮೃತ ವ್ಯಕ್ತಿಯಾಗಿದ್ದಾರೆ. ಬಾರ್ ನಲ್ಲಿ ನೀಡಲಾಗಿರುವ ಮದ್ಯದ ಬಗ್ಗೆ ಅನುಮಾನ ವ್ಯಕ್ತಡಿಸಿರುವ ಸ್ಥಳೀಯರ್ ಬಾರ್ ಮುಂದೆ ಮೃತದೇಹ ಇರಿಸಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಈ ಹಿಂದೆಯೂ ಈ ಬಾರ್ ನಿಂದ ಮದ್ಯ ಖರೀದಿಸಿ ಸೇವಿಸಿದ್ದ ಮೂರು ನಾಲ್ಕು ಜನರು ಇದೇ ರೀತಿಯಾಗಿ ಸಾವನ್ನಪ್ಪಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು, ಬಾರ್ ಮಾಲಿಕರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಕ್ಷಣವೇ ಇಲ್ಲಿರುವ ಬಾರ್ ವಿರುದ್ಧ ತನಿಖೆ ನಡೆಸಬೇಕು, ಬಾರ್ ನ್ನು ಮುಚ್ಚಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ