ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯಾಗುತ್ತಾ..? ಈ ಕುರಿತು ಪೆಟ್ರೋಲಿಯಂ ಸಚಿವರು ಹೇಳಿದ್ದೇನು..? - Mahanayaka

ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯಾಗುತ್ತಾ..? ಈ ಕುರಿತು ಪೆಟ್ರೋಲಿಯಂ ಸಚಿವರು ಹೇಳಿದ್ದೇನು..?

10/06/2023

ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯಾಗುತ್ತಾ..? ಈ ಕುರಿತು ಇಂದು ಪೆಟ್ರೋಲಿಯಂ ಸಚಿವ ಹರ್ದೀಪ್‌ ಸಿಂಗ್‌ ಪುರಿ ಹೇಳಿಕೆ ನೀಡಿದ್ದಾರೆ.

ಮೋದಿ ಸರ್ಕಾರದ ಒಂಬತ್ತು ವರ್ಷ ಪೂರೈಸಿರುವ ಕುರಿತು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಸ್ಥಿರವಾಗಿದ್ರೆ ಮತ್ತು ಮುಂದಿನ ತ್ರೈಮಾಸಿಕದಲ್ಲಿ ಈ ಸಂಸ್ಥೆಗಳು ಉತ್ತಮವಾಗಿದ್ರೆ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಇಳಿಕೆ ಮಾಡಬಹುದು ಎಂದಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಸರ್ಕಾರವು 2022ರ ಏಪ್ರಿಲ್‌ನಿಂದ ತೈಲ ಬೆಲೆಯಲ್ಲಿ ಯಾವುದೇ ಏರಿಕೆಯಾಗದಂತೆ ನೋಡಿಕೊಂಡಿದೆ. ಆ ಮೂಲಕ ಗ್ರಾಹಕರಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರ ಕ್ರಮ‌ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ಬೆಲೆ ನಿಗದಿ ವಿಷಯವು ಕ್ರಿಯಾತ್ಮಕ ವಿಷಯವಾಗಿದೆ. ಸರ್ಕಾರವು ತನ್ನ ಒಂಬತ್ತು ವರ್ಷಗಳ ಅವಧಿಯಲ್ಲಿ ಜನರಿಗೆ ಸಹಾಯ ಮಾಡಲು ಹಲವಾರು ಕಲ್ಯಾಣ ಕ್ರಮಗಳನ್ನು ಕೈಗೊಂಡಿದೆ. ಬಿಜೆಪಿಯೇತರ ರಾಜ್ಯ ಸರ್ಕಾರಗಳು ವ್ಯಾಟ್ ಅನ್ನು ಕಡಿಮೆ ಮಾಡದೇ ಬಿಜೆಪಿ ಆಡಳಿತ ಇರುವ ಸರ್ಕಾರಗಳಿಗಿಂತ ಹೆಚ್ಚಿನ ಬೆಲೆಗೆ ಪೆಟ್ರೋಲ್ ಮತ್ತು ಡೀಸೆಲನ್ನು ಮಾರಾಟ ಮಾಡುತ್ತಿವೆ. ಆದರೂ ಬೆಲೆ ಏರಿಕೆ ಬಗ್ಗೆ ಮಾತನಾಡುತ್ತವೆ ಎಂದು ವಾಗ್ದಾಳಿ ನಡೆಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ