ಜೈಲಿನಲ್ಲಿ ಸಿಗರೇಟ್ ಹಿಡಿದ ದರ್ಶನ್ ಫೋಟೋ ವೈರಲ್! - Mahanayaka

ಜೈಲಿನಲ್ಲಿ ಸಿಗರೇಟ್ ಹಿಡಿದ ದರ್ಶನ್ ಫೋಟೋ ವೈರಲ್!

darshan
25/08/2024

ಬೆಂಗಳೂರು: ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಅವರಿಗೆ ರಾಜಾತಿಥ್ಯ ನೀಡಲಾಗ್ತಿದೆಯೇ ಎನ್ನುವ ಅನುಮಾನ ಸೃಷ್ಟಿಯಾಗಿದ್ದು, ಫೋಟೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ದರ್ಶನ್​ ಅವರು ಸ್ಪೆಷಲ್​ ಬ್ಯಾರಕ್​ ನಿಂದ ಹೊರಬಂದು, ಮೂವರ ಜೊತೆ ಕುಳಿತು ಹರಟೆ ಹೊಡೆಯುತ್ತಿದ್ದಾರೆ. ಕಾಫಿ ಮಗ್ ಹಾಗೂ ಸಿಗರೇಟ್ ಹಿಡಿದು ಕುಳಿತಿರುವ ದೃಶ್ಯ ಫೋಟೋದಲ್ಲಿದೆ.

ಪರಪ್ಪನ ಅಗ್ರಹಾರದಲ್ಲಿರುವ ದರ್ಶನ್‌ ರನ್ನ ವಿಐಪಿ ಸೆಕ್ಯುರಿಟಿ ಸೆಲ್‌–1ನಲ್ಲಿ ಹಾಗೂ ರೌಡಿ ಶೀಟರ್‌ ವಿಲ್ಸನ್‌ ಗಾರ್ಡನ್‌ ನಾಗನನ್ನ ಬ್ಯಾರಕ್ 3 ರಲ್ಲಿ ಇರಿಸಲಾಗಿದೆ. ಹೀಗಿದ್ದರೂ ಜೈಲಲ್ಲಿ ದರ್ಶನ್—ನಾಗನ ನಡುವೆ ಭೇಟಿ ಸಾಧ್ಯವಾಗಿದೆ ಎನ್ನಲಾಗಿದೆ.

ಈ ಫೋಟೋದ ಸತ್ಯಾಸತ್ಯತೆ ಇನ್ನೂ ತಿಳಿದು ಬಂದಿಲ್ಲ. ಆದರೂ ಇದೀಗ ವೈರಲ್ ಆಗಿರುವ ಫೋಟೋ ನಾನಾ ಕಥೆಗಳ ಸೃಷ್ಟಿಗೆ ಕಾರಣವಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಪೊಲೀಸರು ಈ ಕೊಲೆ ಕೇಸ್ ಸಂಬಂಧ  ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ. ಇದರ ನಡುವೆಯೇ ಈ ಫೋಟೋ ವೈರಲ್ ಆಗಿದೆ. ಜೈಲು ಅಧಿಕಾರಿಗಳು ಈ ಬಗ್ಗೆ ಏನು ಸ್ಪಷ್ಟನೆ ನೀಡುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ