7:31 PM Saturday 18 - October 2025

ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ಉಚಿತ ತರಬೇತಿ ಪಡೆಯಿರಿ: ಮಾಹಿತಿಗಾಗಿ ಈ ಸುದ್ದಿ ಓದಿ

28/10/2020

ಶಿವಮೊಗ್ಗ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (CBRSETI) ಮಣಿಪಾಲ ಇವರು ನಿರುದ್ಯೋಗಿ ಸ್ವಉದ್ಯೋಗಾಕಾಂಕ್ಷಿಗಳಿಗಾಗಿ 09 ನವೆಂಬರ್-2020 ರಿಂದ 30 ದಿನಗಳ “ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ” ಉಚಿತ ತರಬೇತಿಯನ್ನು ಮಣಿಪಾಲದಲ್ಲಿ ಹಮ್ಮಿಕೊಳ್ಳಲಾಗಿದ್ದು, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ವ್ಯಾಪ್ತಿಯಲ್ಲಿ ನೆಲೆಸಿರುವ 18 ರಿಂದ 45 ರೊಳಗಿನ ವಯೋಮಾನದ ನಿರುದ್ಯೋಗಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಿದೆ.


ತರಬೇತಿಯಲ್ಲಿ ಊಟ – ವಸತಿ ಸಂಪೂರ್ಣವಾಗಿ ಉಚಿತವಾಗಿದ್ದು, ಸಂಬಂಧಿಸಿದ ಕ್ಷೇತ್ರದ ಬಗ್ಗೆ ವಿಸ್ತಾರವಾಗಿ ತಿಳಿಸುವುದರ ಜೊತೆಗೆ ಉದ್ಯಮಶೀಲತೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿ ಮಾಹಿತಿ ನೀಡಲಾಗುತ್ತದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೂಡಲೇ ತಮ್ಮ ಹೆಸರು, ಪೂರ್ಣವಿಳಾಸ, ಪಿನ್ ಕೋಡ್, ಸಂಪರ್ಕಕ್ಕೆ ಲಭ್ಯವಿರುವ ದೂರವಾಣಿ ಸಂಖ್ಯೆ, ವಯಸ್ಸು, ವಿದ್ಯಾರ್ಹತೆ, ಪಡೆಯಲಿಚ್ಚಿಸಿರುವ ತರಬೇತಿಯ ಹೆಸರು, ಮುಂತಾದ ಮಾಹಿತಿಯೊಂದಿಗೆ ಖಾಲಿ ಹಾಳೆಯಲ್ಲಿ ಅರ್ಜಿಯನ್ನು ಬರೆದು ದಿ:07-11-2020 ರೊಳಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (CBRSETI), ಕೆನರಾ ಬ್ಯಾಂಕ್ ಪ್ರ್ರಧಾನ ಕಛೇರಿ (ಅನೆಕ್ಸ್) ಸಂಕೀರ್ಣ, ಮಣಿಪಾಲ – 576104 ಇಲ್ಲಿಗೆ ತಲುಪುವಂತೆ ಕಳುಹಿಸಿಕೊಡಲು ಕೋರಲಾಗಿದೆ.


ಒಬ್ಬ ಅಭ್ಯರ್ಥಿಗೆ ಒಂದು ತರಬೇತಿಯನ್ನು ಪಡೆಯಲು ಅವಕಾಶವಿರುತ್ತದೆ. ಆಸಕ್ತ ಕ್ಷೇತ್ರಕ್ಕೆ ಅರ್ಜಿಯನ್ನು ಕಳುಹಿಸುವ್ಯದು. ಗ್ರಾಮೀಣ ಪ್ರದೇಶದ ಬಿ.ಪಿ.ಎಲ್ ಕುಟುಂಬದ ಅಭ್ಯರ್ಥಿಗಳಿಗೆ ಮೊದಲ ಪ್ರಾಶಸ್ತ್ಯ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ: 0820-2570455 ಯನ್ನು ಸಂಪರ್ಕಿಸುವುದು.


ಇತ್ತೀಚಿನ ಸುದ್ದಿ

Exit mobile version