ಮಳೆಯ ಎಫೆಕ್ಟ್: ರಸ್ತೆಯಲ್ಲೇ ಜಾರಿ ಪಲ್ಟಿಯಾದ ಪಿಕಪ್ ವಾಹನ
ಕೊಟ್ಟಿಗೆಹಾರ : ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿಯಾದ ಘಟನೆ ನಡೆದಿದ್ದು, ಪಿಕಪ್ ವಾಹನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಚಾರ್ಮಾಡಿ ಘಾಟಿಯ ಆಲೇಖಾನ್ ಎಂಬಲ್ಲಿ ಘಟನೆ ನಡೆದಿದೆ. ರಸ್ತೆ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಇದ್ದಕ್ಕಿದ್ದಂತೆ ವಾಹನ ಪಲ್ಟಿಯಾಗಿದೆ. ಎತ್ತರದ ರಸ್ತೆ ಹಾಗೂ ಮಳೆಯಿಂದ ತೇವಗೊಂಡಿದ್ದ ರಸ್ತೆಯಲ್ಲಿ ಪಿಕಪ್ ಚಕ್ರ ರಸ್ತೆಯಿಂದ ಕೆಳಗಿಳಿಯುತ್ತಿದ್ದಂತೆ ಜಾರಿ ಪಲ್ಟಿಯಾಗಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಾಯಗೊಂಡಿರುವ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























