30 ಅಡಿ ಆಳದ ಕಂದಕಕ್ಕೆ ಉರುಳಿದ ಪಿಕಪ್ ! - Mahanayaka
6:42 PM Wednesday 20 - August 2025

30 ಅಡಿ ಆಳದ ಕಂದಕಕ್ಕೆ ಉರುಳಿದ ಪಿಕಪ್ !

koppa
02/06/2025


Provided by

ಚಿಕ್ಕಮಗಳೂರು:  ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನವೊಂದು ಕಂದಕಕ್ಕೆ ಉರುಳಿದ್ದು,  ಘಟನೆಯಲ್ಲಿ ಪಿಕಪ್ ಚಾಲಕ ಮತ್ತು ಇಬ್ಬರಿಗೆ ಗಾಯವಾಗಿದ್ದು, ಅವರನ್ನು ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊಪ್ಪ ತಾಲೂಕಿನ ಜಯಪುರ ಸಮೀಪದ ಜಲದುರ್ಗದ ಬಳಿ ಈ ಘಟನೆ ನಡೆದಿದೆ. ಚಿಕ್ಕಮಗಳೂರಿನಿಂದ ಉಡುಪಿಗೆ ತರಕಾರಿ ಕೊಂಡೊಯ್ಯುತ್ತಿದ್ದ ಪಿಕಪ್  ಚಾಲಕನ ನಿಯಂತ್ರಣ ತಪ್ಪಿ ಕಂದಕ್ಕೆ ಉರುಳಿದೆ.

ಈ ಕಂದಕ ಸುಮಾರು 30 ಆಳವಿದೆ. ಆದರೆ ಕಂದಕದಲ್ಲಿದ್ದ ಅಡಿಕೆ ಮರಗಳಿಗೆ  ಪಿಕಪ್ ಸಿಲುಕಿದ್ದರಿಂದ ವೇಗ ಕಡಿಮೆಯಾಗಿ ಪಿಕಪ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ