ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜಿನಿಂದ ಪಿಕಪ್ ವಾಹನ ಪಲ್ಟಿ; ಚಾಲಕನಿಗೆ ಗಂಭೀರ ಗಾಯ - Mahanayaka

ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜಿನಿಂದ ಪಿಕಪ್ ವಾಹನ ಪಲ್ಟಿ; ಚಾಲಕನಿಗೆ ಗಂಭೀರ ಗಾಯ

charmadighat
02/06/2025

ಚಿಕ್ಕಮಗಳೂರು: ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜಿನಿಂದ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿರುವ ಘಟನೆ ನಡೆದಿದೆ.

ಈ ಘಟನೆ ಚಾರ್ಮಾಡಿ ಘಾಟಿಯ ಮಲೆಯಮಾರುತ ಬಳಿ, ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕಮಗಳೂರಿನಿಂದ ಮಂಗಳೂರಿಗೆ ತರಕಾರಿ ಸಾಗಿಸುತ್ತಿದ್ದ ವಾಹನದ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಘಾಟಿಯಲ್ಲಿ ಕಾಣದ ಮಟ್ಟಿಗೆ ಮಂಜು ಆವರಿಸಿಕೊಂಡಿದ್ದ ಹಿನ್ನೆಲೆಯಲ್ಲಿ ರಸ್ತೆ ಸ್ಪಷ್ಟವಾಗಿ ಕಾಣದೆ ಈ ಅನಾಹುತ ಸಂಭವಿಸಿದೆ ಎಂದು ತಿಳಿದುಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ