ಮೋದಿಯವರ ಸುಳ್ಳಿನ ಪಿಕ್ಚರ್ ಬಾಕಿ ಇರಬಹುದು: ಸಿಎಂ ಸಿದ್ದರಾಮಯ್ಯ ತಿರುಗೇಟು

ಮೈಸೂರು: ಅಭಿವೃದ್ಧಿ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಅಭಿವೃದ್ಧಿ ಆಗಿದ್ದರೆ ತಾನೇ ಟ್ರೇಲರ್, ಅವರದ್ದು ಸುಳ್ಳಿನ ಪಿಕ್ಚರ್ ಬಾಕಿ ಇರಬಹುದು ಎಂದು ತಿರುಗೇಟು ನೀಡಿದ್ದಾರೆ.
ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಬಿಜೆಪಿ 200 ಸೀಟ್ ಗೆಲ್ಲುವುದು ಅನುಮಾನವಿದೆ. ಬಿಜೆಪಿಯ ಸಮೀಕ್ಷೆಯಿಂದಲೇ ಈ ವಿಚಾರ ಬಹಿರಂಗವಾಗಿದೆ. ಹೀಗಾಗಿ ಅವರು 400 ಸೀಟ್ ಗೆಲ್ಲುತ್ತೇವೆಂದು ಬಿಂಬಿಸುತ್ತಿದ್ದಾರೆ ಎಂದರು.
ಕಡಿಮೆ ಸ್ಥಾನ ಬರುತ್ತದೆ ಎಂದು ಗೊತ್ತಾದ ಮೇಲೆಯೇ ಹೆಚ್ಚು ಸ್ಥಾನ ಬರುತ್ತವೆಂದು ಬಿಂಬಿಸುವ ಪ್ರಯತ್ನ ಮಾಡ್ತಿದ್ದಾರೆ. ಇದು ಕೂಡ ಅವರ ತಂತ್ರಗಾರಿಕೆ ಎಂದು ಅವರು ಹೇಳಿದರು.
ನನಗೆ ವಿಶ್ವಾಸ ಇದೆ. ಕರ್ನಾಟಕದಲ್ಲಿ ನಾವು 18ರಿಂದ 20 ಸ್ಥಾನ ಗೆಲ್ಲುತ್ತೇವೆ. ಈ ಬಾರಿ ಬಿಜೆಪಿಯ ಸುಳ್ಳಿಗೆ ಯಾರು ಸಹ ಮರಳಾಗುವುದಿಲ್ಲ. ಮೋದಿಯೂ ಬಂದು ಪ್ರಚಾರ ಮಾಡಲಿ. ವಿಧಾನಸಭೆ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದ್ದರು. ಆಗ ಏನಾಯಿತು ಎಂಬುದು ಗೊತ್ತಿದೆ. ಈಗಲೂ ಮಾಡಲಿ ಬಿಡಿ ಎಂದು ಸಿದ್ದರಾಮಯ್ಯ ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth