ಪಿಲಿನಲಿಕೆ—7 ಯಶಸ್ವಿ: ತುಳುನಾಡಿನ ಪ್ರತಿಷ್ಠಿತ ಮತ್ತು ಆಹ್ವಾನಿತ 12 ತಂಡ ಭಾಗಿ

ಮಂಗಳೂರಿನ ಪಿಲಿನಲಿಕೆ ಪ್ರತಿಷ್ಠಾನ ಮಂಗಳೂರು ಇದರ ಸಾರಥ್ಯದಲ್ಲಿ ನಮ್ಮ ಟಿವಿಯ ಸಹಯೋಗದಲ್ಲಿ “ಪಿಲಿನಲಿಕೆ-7″ ಮಂಗಳೂರಿನ ಮಂಗಳಾ ಕ್ರೀಡಾಂಗಣದ ಬಳಿಯ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಿತು.
ತುಳುನಾಡಿನ ಅದ್ಭುತ ಕಲಾ ಪರಂಪರೆ ಮತ್ತು ಇಂದು ಇಡೀ ವಿಶ್ವದ ಗಮನವನ್ನು ಸೆಳೆದಿರುವ ಹುಲಿವೇಷ ಕುಣಿತದ ಮೂಲ ಸ್ವರೂಪವನ್ನು ಉಳಿಸುತ್ತಾ ಅದನ್ನು ಬೆಳೆಸುವ ನಿಟ್ಟಿನಲ್ಲಿ ಆರಂಭಿಸಿದ ಪಿಲಿನಲಿಕೆ ಸ್ಪರ್ಧೆ ಯಶಸ್ವಿಯಾಗಿ 6 ಆವೃತ್ತಿಗಳನ್ನು ಪೂರೈಸಿದೆ.
ಕೋವಿಡ್ ಕಾರಣದಿಂದ ಕಳೆದೆರಡು ವರ್ಷಗಳಿಂದ ಅದನ್ನು ಮುಂದುವರೆಸಲು ಅಸಾಧ್ಯವಾಗಿತ್ತು. ಇಂದು ನಡೆದ ಪಿಲಿನಲಿಕೆ-7 ಸ್ಪರ್ಧಾಕಣದಲ್ಲಿ ತುಳುನಾಡಿನ ಪ್ರತಿಷ್ಠಿತ ಮತ್ತು ಆಹ್ವಾನಿತ 12 ತಂಡಗಳು ಭಾಗವಹಿಸಿತು. ಬಹುಮಾನ ರೂಪದಲ್ಲಿ ಪ್ರಥಮ ರೂ.3,00,000/- ಮತ್ತು ಫಲಕ, ದ್ವಿತೀಯ ರೂ.2,00,000/- ಮತ್ತು ಫಲಕ, ತೃತೀಯ ರೂ.1,00,000/- ಮತ್ತು ಫಲಕ ಹಾಗೂ ವೈಯಕ್ತಿಕ ವಿಭಾಗದಲ್ಲಿ ಅತ್ಯುತ್ತಮ ಮರಿಹುಲಿ, ಕರಿಹುಲಿ, ಮುಡಿ ಹಾರಿಸುವುದು, ತಾಸೆ, ಬಣ್ಣಗಾರಿಕೆ, ಅತ್ಯುತ್ತಮ ಹುಲಿ ಕುಣಿತಕ್ಕೆ ತಲಾ ರೂ. 50,000/- ನಗದು ಬಹುಮಾನಗಳನ್ನು ನೀಡಲಾಯ್ತು.
ಈ ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿ ತಂಡಕ್ಕೂ ರೂ.50,000ವನ್ನು ಪ್ರೋತ್ಸಾಹಕ ರೂಪದಲ್ಲಿ ನೀಡಲಾಯಿತು. ಈ ಬಾರಿಯ ಪಿಲಿನಲಿಕೆ-7ಕ್ಕೆ ಬಾಲಿವುಡ್ ನ ಖ್ಯಾತ ತಾರೆಯರಾದ ಸುನಿಲ್ ಶೆಟ್ಟಿ, ಪೂಜಾ ಹೆಗ್ಡೆ ಹಾಗೂ ಹೆಸರಾಂತ ನಟ ರಿಷಬ್ ಶೆಟ್ಟಿ ಸೇರಿದಂತೆ ಹಲವಾರು ನಟ ನಟಿಯರು, ತುಳು ರಂಗಭೂಮಿಯ ಹೆಸರಾಂತ ಕಲಾವಿದರು ಬಂದು ತಾರಾ ಮೆರುಗು ನೀಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka