ವಯನಾಡ್ ಗೆ ಭೇಟಿ ನೀಡಿದ ಪ್ರಧಾನಿ ಮೋದಿಯನ್ನು ಸ್ವಾಗತಿಸಿದ ಪಿಣರಾಯಿ ವಿಜಯನ್ - Mahanayaka

ವಯನಾಡ್ ಗೆ ಭೇಟಿ ನೀಡಿದ ಪ್ರಧಾನಿ ಮೋದಿಯನ್ನು ಸ್ವಾಗತಿಸಿದ ಪಿಣರಾಯಿ ವಿಜಯನ್

narendra modhi
10/08/2024

ಕಣ್ಣೂರು: ಭೂಕುಸಿತದಿಂದ 300 ಕ್ಕೂ ಅಧಿಕ ಜನರು ಕೇರಳದ ವಯನಾಡಿನಲ್ಲಿ ಮೃತಪಟ್ಟಿದ್ದು, ಈ ಮಹಾದುರಂತದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಇಂದು ಕೇರಳಕ್ಕೆ ಭೇಟಿ ನೀಡಿದ್ದಾರೆ.

ಬೆಳಗ್ಗೆ 11 ಗಂಟೆ ಸುಮಾರಿಗೆ ಮೋದಿ ಅವರ ವಿಮಾನ ಕಣ್ಣೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದರು. ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸ್ವಾಗತಿಸಿದರು.

ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ನಲ್ಲಿ ವಯನಾಡ್ ಗೆ ತೆರಳಿ ಭೂಕುಸಿತಕ್ಕೆ ಒಳಗಾದ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

ಭೇಟಿ ಸಂದರ್ಭ ರಕ್ಷಣಾ ಕಾರ್ಯಾಚರಣೆ ಮತ್ತು ಪುನರ್ವಸತಿ ಕಾರ್ಯಗಳ ಬಗ್ಗೆ ರಕ್ಷಣಾ ಪಡೆಗಳಿಂದ ಪ್ರಧಾನಿ ಅವರು ಮಾಹಿತಿ ಪಡೆಯಲಿದ್ದಾರೆ. ಪರಿಹಾರ ಶಿಬಿರ ಮತ್ತು ಆಸ್ಪತ್ರೆಗೆ ಭೇಟಿ ನೀಡಲಿರುವ ಅವರು, ಸಂತ್ರಸ್ತರ ಜೊತೆ ಮಾತನಾಡಲಿದ್ದಾರೆ. ನಂತರ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದು ಅವರು ತಿಳಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ