6:53 AM Saturday 20 - December 2025

ಚೈತ್ರಾ ಕುಂದಾಪುರಗೆ ಪಿಟ್ಸ್ ಬಂದಿಲ್ಲ: ವೈದ್ಯ.ಡಾ.ದಿವ್ಯ ಪ್ರಕಾಶ್ ಸ್ಪಷ್ಟನೆ

chaithra kundapur
18/09/2023

ಬೆಂಗಳೂರು: ಬಿಜೆಪಿ ಟಿಕೇಟ್ ವಂಚನೆ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಆರೋಗ್ಯ ಚೆನ್ನಾಗಿದೆ ಎಂಬುದು ವೈದ್ಯಕೀಯ ತಪಾಸಣೆ ಬಳಿಕ ಸ್ಪಷ್ಟವಾಗಿದೆ.

ಈ ಬಗ್ಗೆ ವೈದ್ಯ.ಡಾ.ದಿವ್ಯ ಪ್ರಕಾಶ್ ಸ್ಪಷ್ಟಪಡಿಸಿದ್ದು,ಚೈತ್ರಾಳ ಆರೋಗ್ಯ ಎಲ್ಲಾ ತಪಾಸಣೆಯಲ್ಲೂ ನಾರ್ಮಲ್ ಇದೆ, ಇಸಿಜಿ ಕೂಡ ಸಾಮಾನ್ಯವಾಗಿದೆ‌.ನರವೈದ್ಯ ತಜ್ಞರು ಮನೋ ವೈದ್ಯರು ತಪಾಸಣೆ ಮಾಡಿದ್ದು,ಎಲ್ಲೂ ಆರೋಗ್ಯ ಸಮಸ್ಯೆ ಕಂಡುಬಂದಿಲ್ಲ ಎಂದಿದ್ದಾರೆ.

ಚೈತ್ರಾಳ ಬಾಯಲ್ಲಿ ನೊರೆ ಬಂದ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದು ಫಂಕ್ಷನಲ್ ಆಗಿ ಆಗಿರೋದು. ಅವರೇ ಅದನ್ನ ಮಾಡಿಕೊಂಡಿರೋದು. ಪಿಟ್ಸ್ ಏನೂ ಬಂದಿಲ್ಲ. ಬೆಳಗ್ಗೆ ಸಿಸಿಬಿ ಅಧಿಕಾರಿಗಳು ವಿಚಾರಿಸಿದ್ದಾರೆ.ಇದೇ ವೇಳೆ ಪಿಟ್ಸ್ ಇತ್ತ ಎಂಬ ವಿಚಾರಕ್ಕೆ ಉತ್ತರಿಸಿದ ವೈದ್ಯರು, ಪಿಟ್ಸ್ ಪತ್ತೆ ಮಾಡೋದಕ್ಕೆ ಎಂಆರ್‌ಐ ಸ್ಕ್ಯಾನಿಂಗ್ ಮಾಡಿದ್ದೀವಿ. ಇಇಜಿ ಸ್ಕ್ಯಾನಿಂಗ್ ಕೂಡ ಮಾಡಿದ್ದೇವೆ ಎಲ್ಲಾ ನಾರ್ಮಲ್ ಇದೆ. ಸದ್ಯಕ್ಕೆ ಪಿಟ್ಸ್ ಕಂಡು ಬಂದಿಲ್ಲ. ನ್ಯೂರಾಲಾಜಿಸ್ಟ್ ಕೆಲವು ಮಾತ್ರೆ ಕೊಟ್ಟಿದ್ದಾರೆ ಎಂದು ವಿವರಿಸಿದ್ದಾರೆ.

ಇತ್ತೀಚಿನ ಸುದ್ದಿ

Exit mobile version