ನಾಳೆ ನಾಗ್ಪುರದಲ್ಲಿ ಆರೆಸ್ಸೆಸ್ ಸಂಸ್ಥಾಪಕರಿಗೆ ಗೌರವ ನಮನ ಸಲ್ಲಿಸಲಿರುವ ಪ್ರಧಾನಿ: ಪ್ರಮುಖ ಮೂಲಸೌಕರ್ಯ ಯೋಜನೆಗಳಿಗೆ ಚಾಲನೆ

29/03/2025
ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ನಾಗ್ಪುರಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಅವರು ಸ್ಮೃತಿ ಮಂದಿರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ ಸ್ಎಸ್) ಸ್ಥಾಪಕ ನಾಯಕರಿಗೆ ಗೌರವ ಸಲ್ಲಿಸಲಿದ್ದಾರೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.
ಅವರ ಭೇಟಿಯು ಗುಡಿ ಪಾಡ್ವಾ ಉತ್ಸವವನ್ನು ಗುರುತಿಸುವ ಆರ್ ಎಸ್ಎಸ್ ನ ಸಮಾರಂಭದೊಂದಿಗೆ ಹೊಂದಿಕೆಯಾಗುತ್ತದೆ.
ನಾಗ್ಪುರದ ಡಾ.ಹೆಡ್ಗೆವಾರ್ ಸ್ಮೃತಿ ಮಂದಿರದಲ್ಲಿರುವ ಆರ್ ಎಸ್ಎಸ್ ಸಂಸ್ಥಾಪಕ ಕೆ.ಬಿ.ಹೆಡ್ಗೆವಾರ್ ಮತ್ತು ಸಂಘಟನೆಯ ಎರಡನೇ ಸರಸಂಘಚಾಲಕ ಎಂ.ಎಸ್.ಗೋಲ್ವಾಲ್ಕರ್ ಅವರ ಸ್ಮಾರಕಗಳಿಗೆ ಪ್ರಧಾನಿ ಮೋದಿ ಗೌರವ ಸಲ್ಲಿಸಲಿದ್ದಾರೆ
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj