ನಮೋ‌ ದೀಪಾವಳಿ: ಹಿಮಾಚಲ ಪ್ರದೇಶದಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ - Mahanayaka
10:12 AM Saturday 23 - August 2025

ನಮೋ‌ ದೀಪಾವಳಿ: ಹಿಮಾಚಲ ಪ್ರದೇಶದಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ

12/11/2023


Provided by

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಪ್ರದಾಯಕ್ಕೆ ಅನುಗುಣವಾಗಿ ಈ ವರ್ಷ ಸೈನಿಕರೊಂದಿಗೆ ದೀಪಾವಳಿ ಆಚರಿಸಲು ಚೀನಾದ ಗಡಿಗೆ ಹೊಂದಿಕೊಂಡಿರುವ ಹಿಮಾಚಲ ಪ್ರದೇಶದ ಲೆಪ್ಚಾಗೆ ತಲುಪಿದ್ದಾರೆ.

ಭಾನುವಾರ ಬೆಳಿಗ್ಗೆ ದೂರದ ಹಳ್ಳಿಯನ್ನು ತಲುಪಿದ ಪಿಎಂ ಮೋದಿ, “ನಮ್ಮ ಧೈರ್ಯಶಾಲಿ ಭದ್ರತಾ ಪಡೆಗಳೊಂದಿಗೆ ದೀಪಾವಳಿ ಆಚರಿಸಲು ಹಿಮಾಚಲ ಪ್ರದೇಶದ ಲೆಪ್ಚಾ ತಲುಪಿದ್ದೇನೆ” ಎಂದು ಬರೆದಿದ್ದಾರೆ.
ಇದಕ್ಕೂ ಮುನ್ನ ಪ್ರಧಾನಿ ಮೋದಿ ತಮ್ಮ ದೀಪಾವಳಿ ಸಂದೇಶದಲ್ಲಿ ದೇಶದ ಜನರಿಗೆ “ಅದ್ಭುತ ಆರೋಗ್ಯ” ವನ್ನು ಕರುಣಿಸಲಿ ಎಂದು ಶುಭ ಹಾರೈಕೆ ಮಾಡಿದರು.

ಎಲ್ಲರಿಗೂ ದೀಪಾವಳಿಯ ಶುಭಾಶಯಗಳು. ಈ ವಿಶೇಷ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಅದ್ಭುತ ಆರೋಗ್ಯವನ್ನು ತರಲಿ” ಎಂದು ಅವರು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಗಡಿ ಕಾಯುವ ಸೈನಿಕರೊಂದಿಗೆ ದೀಪಾವಳಿ ಆಚರಿಸುವ ದೀರ್ಘಕಾಲದ ಸಂಪ್ರದಾಯವನ್ನು ಹೊಂದಿದ್ದಾರೆ.

2014 ರಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ ಅವರು ಸಶಸ್ತ್ರ ಪಡೆಗಳೊಂದಿಗೆ ದೀಪಗಳ ಹಬ್ಬವನ್ನು ಕಳೆಯುವುದನ್ನು ರೂಢಿಸಿಕೊಂಡಿದ್ದಾರೆ. ಅವರ ತ್ಯಾಗಗಳಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ದೂರದ ಸ್ಥಳಗಳಿಗೆ ಪ್ರಯಾಣಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ