6:08 PM Thursday 16 - October 2025

ಧರ್ಮಸ್ಥಳ: ಪ್ರಧಾನಿ ಮೋದಿ ದೀರ್ಘಾಯುಷ್ಯಕ್ಕಾಗಿ 108 ಪುರೋಹಿತರಿಂದ ಮಹಾಮೃತ್ಯುಂಜಯ ಹೋಮ

homa
17/01/2022

ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿ ಅವರ ದೀರ್ಘಾಯಸ್ಸು ಹಾಗೂ ಆರೋಗ್ಯ ವೃದ್ಧಿಗಾಗಿ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಹೋಮ ಸೋಮವಾರ ಬೆಳಗ್ಗ 7ಗಂಟೆಯಿಂದ ನಡೆಯುತ್ತಿದೆ.

ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ಸಮಸ್ತ ಜನತೆಯ ಪರವಾಗಿ ವೇದಮೂರ್ತಿ ನಾಗೇಂದ್ರ ಭಾರದ್ವಾಜ್ ಸುರತ್ಕಲ್ ಅವರ ಪ್ರಧಾನ ಪೌರೋಹಿತ್ಯದಲ್ಲಿ 108 ಪುರೋಹಿತರಿಂದ ಮಹಾ ಮೃತ್ಯುಂಜಯ ಹೋಮ ನೆರವೇರುತ್ತಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರ ಸಮ್ಮುಖದಲ್ಲಿ ಇಂದು ಬೆಳಗ್ಗೆ 7ಗಂಟೆಯಿಂದ ಚತುರ್ವೇದ ಪಾರಾಯಣ ಪ್ರಾರಂಭಿಸಿ, ಗೋಪೂಜೆ, ಮಹಾಗಣಪತಿ ಹೋಮದ ಬಳಿಕ ಮಹಾಮೃತ್ಯುಂಜಯ ಹೋಮ ನಡೆಸಲಾಗುತ್ತಿದೆ.

ಈ ಸಂದರ್ಭದಲ್ಲಿ ಸಚಿವರಾದ ಕೆ.ಎಸ್.ಈಶ್ವರಪ್ಪ, ಸಿ.ಸಿ.ಪಾಟೀಲ್, ಶಶಿಕಲಾ ಜೊಲ್ಲೆ, ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ಅವಿಭಾಜಿತ ಜಿಲ್ಲೆಯ ಎಲ್ಲ ಶಾಸಕರು, ವಿವಿಧ ಜಿಲ್ಲೆಗಳ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಖ್ಯಾತ ಸಮಾಜ ಸೇವಕಿ, ಪದ್ಮಶ್ರೀ ಪುರಸ್ಕೃತೆ ಶಾಂತಿ ದೇವಿ ವಿಧಿವಶ

ಬ್ರಿಟಿಷ್ ಕಾಲದ ಬಂಗಲೆಯಲ್ಲಿ ಕಚೇರಿ ತೆರೆದ ಸಚಿವ ಎಸ್‌.ಅಂಗಾರ

ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಣೆ: ಕೇಂದ್ರ ಸರ್ಕಾರ ದೇಶದ ಕ್ಷಮೆ ಕೇಳಬೇಕು; ಸಿದ್ಧರಾಮಯ್ಯ

ಒತ್ತಾಯಪೂರ್ವಕವಾಗಿ ಯಾರಿಗೂ ಕೋವಿಡ್-19 ಲಸಿಕೆ ನೀಡುವುದಿಲ್ಲ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಸ್ಪಷ್ಟನೆ

ಖ್ಯಾತ ಕಥಕ್ ನೃತ್ಯಗಾರ ಪಂಡಿತ್ ಬಿರ್ಜು ಮಹಾರಾಜ್ ಹೃದಯಾಘಾತದಿಂದ ನಿಧನ

ಇತ್ತೀಚಿನ ಸುದ್ದಿ

Exit mobile version