10:47 AM Wednesday 20 - August 2025

ರಂಝಾನ್ ಶುಭಾಶಯ ಕೋರಿದ ಪ್ರಧಾನಿ: ‘ಇದು ನಮ್ಮ ಸಮಾಜದಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ತರುತ್ತದೆ’ ಎಂದ ಮೋದಿ

02/03/2025

ಪವಿತ್ರ ರಂಝಾನ್ ಮಾಸದ ಆರಂಭದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭ ಕೋರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಪವಿತ್ರ ರಂಝಾನ್ ತಿಂಗಳು ಪ್ರಾರಂಭವಾಗುತ್ತಿದ್ದಂತೆ, ಇದು ನಮ್ಮ ಸಮಾಜದಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ತರಲಿ. ಈ ಪವಿತ್ರ ತಿಂಗಳು ಪ್ರತಿಬಿಂಬ, ಕೃತಜ್ಞತೆ ಮತ್ತು ಭಕ್ತಿಯನ್ನು ಸಂಕೇತಿಸುತ್ತದೆ, ಸಹಾನುಭೂತಿ, ದಯೆ ಮತ್ತು ಸೇವೆಯ ಮೌಲ್ಯಗಳನ್ನು ನೆನಪಿಸುತ್ತದೆ. ರಂಜಾನ್ ಮುಬಾರಕ್!” ಎಂದಿದ್ದಾರೆ.

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ ರಾತ್ರಿ ಎಲ್ಲರಿಗೂ ರಂಝಾನ್ ಶುಭಾಶಯ ಕೋರಿದ್ದಾರೆ.

ಇದಕ್ಕೂ ಮುನ್ನ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಪವಿತ್ರ ರಂಜಾನ್ ಮಾಸದ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version