ಸೇನಾ ಸಮವಸ್ತ್ರ ಧರಿಸುವುದು ಶಿಕ್ಷಾರ್ಹ ಅಪರಾಧ: ಪ್ರಧಾನಿ ಮೋದಿಗೆ ಕೋರ್ಟ್ ನೋಟಿಸ್ - Mahanayaka
2:25 PM Thursday 16 - October 2025

ಸೇನಾ ಸಮವಸ್ತ್ರ ಧರಿಸುವುದು ಶಿಕ್ಷಾರ್ಹ ಅಪರಾಧ: ಪ್ರಧಾನಿ ಮೋದಿಗೆ ಕೋರ್ಟ್ ನೋಟಿಸ್

pm modi
04/02/2022

ನವದೆಹಲಿ: ಕಾನೂನು ಬಾಹಿರವಾಗಿ ಸೇನಾ ಸಮವಸ್ತ್ರವನ್ನು ಪ್ರಧಾನಿ ನರೇಂದ್ರ ಮೋದಿ ಧರಿಸಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಕಚೇರಿಕೆ ಉತ್ತರ ಪ್ರದೇಶದ ಜಿಲ್ಲಾ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.


Provided by

ಪ್ರಯಾಗ್ ರಾಜ್ ಜಿಲ್ಲಾ ನ್ಯಾಯಾಲಯವು, ಪ್ರಧಾನಿ ಮೋದಿ ಸೇನಾ ಸಮವಸ್ತ್ರವನ್ನು ಧರಿಸಿರುವುದು ಶಿಕ್ಷಾರ್ಹ ಅಪರಾಧ ಎಂದು ಹೇಳಿದೆ ಎಂದು ವರದಿಯಾಗಿದೆ.

ವಕೀಲ ರಾಕೇಶ್ ಪಾಂಡೆ ಎಂಬವರು ಐಪಿಸಿ ಸೆಕ್ಷನ್ 153(3)ರ ಅಡಿಯಲ್ಲಿ ಕೋರ್ಟ್ ಗೆ  ಈ ಅರ್ಜಿ ಸಲ್ಲಿಸಿದ್ದು, ಪ್ರಧಾನಿ ಮೋದಿ ವಿರುದ್ಧ ಕ್ರಮಕೈಗೊಳ್ಳುವಂತೆ ಅರ್ಜಿಯಲ್ಲಿ ಒತ್ತಾಯಿಸಿದೆ.

ಸೇನಾ ಸಮವಸ್ತ್ರವನ್ನು ಧರಿಸುವುದು ಐಪಿಸಿ ಸೆಕ್ಷನ್ 140ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಅರ್ಜಿಯಲ್ಲಿ ಬಲವಾಗಿ ಹೇಳಲಾಗಿದೆ. ಭಾರತದ ದಂಡ ಸಂಹಿತೆಯ 140ನೇ ವಿಧಿಯ ಪ್ರಕಾರ ಸೈನಿಕರು ಅಥವಾ ವಾಯುಸೇನಾ ಸಿಬ್ಬಂದಿ ಬಳಸುವ ಸೇನಾ ಸಮವಸ್ತ್ರ ಧರಿಸುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಈ ಹಿನ್ನೆಲೆಯಲ್ಲಿ ಕೋರ್ಟ್ ಪ್ರಧಾನಿ ಕಚೇರಿಗೆ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳಿಗೆ ಪಿ ಎಸ್ ಐ ಖಡಕ್‌ ಎಚ್ಚರಿಕೆ

ಗರ್ಭಿಣಿಯನ್ನು ಬೈಕ್ ​​ನಲ್ಲಿ ​​ ಕರೆತಂದ ಪತಿ: ಆಸ್ಪತ್ರೆ ಮುಂಭಾಗದಲ್ಲೇ ಹೆರಿಗೆ

ಸ್ಥಳೀಯ ಚುನಾವಣೆ: ಬಿಜೆಪಿಯಿಂದ ತೃತೀಯ ಲಿಂಗಿಗಳಿಗೆ ಟಿಕೆಟ್

ದಲಿತ ಯುವತಿಯನ್ನು ಮದುವೆಯಾಗಿದ್ದಕ್ಕೆ ಸ್ವಜಾತಿಯವರಿಂದಲೇ ಯುವಕನ ಕುಟುಂಬಕ್ಕೆ ಬಹಿಷ್ಕಾರ

ಮಹಿಳೆಗೆ ಬಲವಂತವಾಗಿ ಮದ್ಯ ಕುಡಿಸಿ ಗ್ಯಾಂಗ್ ರೇಪ್

 

 

ಇತ್ತೀಚಿನ ಸುದ್ದಿ