ಸೆ. 2ರಂದು ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ - Mahanayaka
8:13 AM Friday 12 - September 2025

ಸೆ. 2ರಂದು ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ

school
30/08/2022

ಶುಕ್ರವಾರ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಆದೇಶ ಹೊರಡಿಸಿದ್ದಾರೆ.


Provided by

ಸೆಪ್ಟೆಂಬರ್ 2ರಂದು ಮಂಗಳೂರು ನಗರದ ಬಹುತೇಕ ಕಡೆಗಳಲ್ಲಿ ಗಣಪತಿ ವಿಗ್ರಹದ ವಿಸರ್ಜನೆಯ ಶೋಭಾಯಾತ್ರೆ ಕಾರ್ಯಕ್ರಮಗಳು ನಡೆಯುವುದರಿಂದ, ಈ ಸಮಯದಲ್ಲಿ ಹಚ್ಚಿನ ಜನದಟ್ಟಣೆ ಹಾಗೂ ವಾಹನ ದಟ್ಟಣೆ ಜಾಸ್ತಿಯಾಗುವ ಸಂಭವವಿರುತ್ತದೆ ಎಂದು ಪೊಲೀಸ್‌ ಇಲಾಖೆಯ ಮಾಹಿತಿಯಂತೆ ತಿಳಿದುಬಂದಿದೆ.

ಅಲ್ಲದೇ ಸೆಪ್ಟೆಂಬರ್ 2ರಂದು ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 1ಕ್ಕೆ ಮಂಗಳೂರಿನಲ್ಲಿ ಸುಮಾರು 3,800 ಕೋಟಿ ರೂಪಾಯಿಗಳ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ.

ಅಲ್ಲದೆ ನಗರದ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ನಡೆಯಲಿರುವ ಸಾರ್ವಜನಿಕ ಸಮಾವೇಶ ಕಾರ್ಯಕ್ರಮದಲ್ಲೂ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಶಾಲಾ ಮಕ್ಕಳ ಸಂಚಾರಕ್ಕೆ ತೊಡಕು ಉಂಟಾಗುವ ಸಾಧ್ಯತೆಗಳಿರುವುದರಿಂದ ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿ ಪೂರ್ವ ಸ್ನಾತಕೊತ್ತರ ಪದವಿ, ಡಿಪ್ಲೋಮ, ಐ.ಟಿ.ಐ.ಸೇರಿದಂತೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಸೆ. 2 ರಂದು ರಜೆಯನ್ನು ಘೋಷಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆದರೆ ಪ್ರಸ್ತುತ ನೀಡಿರುವ ರಜೆ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರೆ ಸಾರ್ವತ್ರಿಕ ರಜಾ ದಿನಗಳಂದು ಸರಿದೂಗಿಸಿಕೊಂಡು ನಿರ್ವಹಿಸುವಂತೆ ತಿಳಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ