ಉಕ್ರೇನ್ ಯುದ್ಧದ ನಂತರ ಮೊದಲ ಬಾರಿಗೆ ಪ್ರಧಾನಿ ಮೋದಿ ಜುಲೈನಲ್ಲಿ ರಷ್ಯಾಕ್ಕೆ ಭೇಟಿ

ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ತಿಂಗಳು ರಷ್ಯಾಕ್ಕೆ ಭೇಟಿ ನೀಡಿ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಸಭೆ ನಡೆಸುವ ಸಾಧ್ಯತೆ ಇದೆ ಎಂದು ಕ್ರೆಮ್ಲಿನ್ ಅಧಿಕಾರಿಯನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ.
ಪ್ರಧಾನಿ ಮೋದಿಯವರ ಭೇಟಿಯು ಯೋಜನೆಯ ಪ್ರಕಾರ ನಡೆದ್ರೆ ಫೆಬ್ರವರಿ 24, 2022 ರಂದು ರಷ್ಯಾ ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ ಇದು ಮೊದಲನೆಯದ್ದಾಗಿದೆ. ಸತತ ಮೂರನೇ ಅವಧಿಗೆ ಐತಿಹಾಸಿಕ ಗೆಲುವು ಸಾಧಿಸಿದ ನಂತರ ಇದು ಅವರ ಮೊದಲ ರಷ್ಯಾ ಭೇಟಿಯಾಗಿದೆ.
ಉಕ್ರೇನ್ ಮೇಲಿನ ರಷ್ಯಾದ ಆಕ್ರಮಣವನ್ನು ಭಾರತ ನೇರವಾಗಿ ಖಂಡಿಸಿಲ್ಲ ಮತ್ತು ಬಿಕ್ಕಟ್ಟನ್ನು ರಾಜತಾಂತ್ರಿಕತೆ ಮತ್ತು ಮಾತುಕತೆಯ ಮೂಲಕ ಪರಿಹರಿಸಬೇಕು ಎಂದು ಪ್ರತಿಪಾದಿಸುತ್ತಿದೆ.
ಪ್ರಧಾನಿ ಮೋದಿಯವರ ಭೇಟಿಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ರಷ್ಯಾದ ವಿದೇಶಾಂಗ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth