ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ಮೋದಿಯವರಿಂದ ಚಾದರ್: ದೇಶದಲ್ಲೀಗ ಬಿಸಿ ಬಿಸಿ ಚರ್ಚೆ - Mahanayaka
10:02 PM Saturday 25 - January 2025

ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ಮೋದಿಯವರಿಂದ ಚಾದರ್: ದೇಶದಲ್ಲೀಗ ಬಿಸಿ ಬಿಸಿ ಚರ್ಚೆ

03/01/2025

ಪ್ರಧಾನಿ ನರೇಂದ್ರ ಮೋದಿ ಗುರುವಾರ ಸೂಫಿ ಸಂತ ಖ್ವಾಜಾ ಮೊಯಿನುದ್ದೀನ್ ಚಿಸ್ತಿ
ಅಜ್ಮೀರ್ ದರ್ಗಾಕ್ಕೆ ‘ಚಾದರ್’ ಕಳುಹಿಸಿಕೊಟ್ಟಿದ್ದಾರೆ. ಅಜ್ಮೀರ್ ದರ್ಗಾ ದಲ್ಲಿ ಶಿವನ ದೇವಾಲಯವಿದೆ ಎಂದು ಹಿಂದೂ ಸೇನಾ ಸಂಘಟನೆಯು ಅಜ್ಮೀರ್ ಜಿಲ್ಲಾ ನ್ಯಾಯಾಲಯದಲ್ಲಿ ಮೊರೆ ಹೋಗಿರುವಾಗಲೇ ಚಾದರ ಸಮರ್ಪಣೆ ವಿಷಯ ಚರ್ಚೆಯಲ್ಲಿದೆ.

ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಪ್ರಧಾನಿ ಮೋದಿ ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜಮಾಲ್ ಸಿದ್ದಿಕಿ ಗೆ ಅಜ್ಮೀರ್ ಉರೂಸ್ ಹಿನ್ನೆಲೆ ಚಾದರ ಸಮರ್ಪಿಸುವ ಫೋಟೊವನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಕಿರಣ್ ರಿಜಿಜು ಅವರ ಪೋಸ್ಟ್ ನ್ನು ಹಂಚಿಕೊಂಡ ಪ್ರಧಾನಿ ನರೇಂದ್ರ ಮೋದಿ, ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಅವರ ಉರೂಸ್ ಸಮಾರಂಭದ ಶುಭಾಶಯಗಳು. ಈ ಸಂದರ್ಭ ದಲ್ಲಿ ಪ್ರತಿಯೊಬ್ಬರ ಜೀವನದಲ್ಲಿ ಸುಖ ಶಾಂತಿ ನೆಲೆಸಲಿ ಎಂದು ಬರೆದುಕೊಂಡಿದ್ದಾರೆ.

ಖ್ವಾಜಾ ಮೊಯಿನುದ್ದೀನ್ ಚಿಸ್ತಿ ದರ್ಗಾ ಗೆ ಉರೂಸು ಸಂದರ್ಭ ದಲ್ಲಿ ʼಚಾದರ್’ ಅರ್ಪಿಸುವ ಸಂಪ್ರದಾಯವನ್ನು ಪ್ರಧಾನಿ ಮೋದಿ ಮುಂದುವರಿಸಿಕೊಂಡು ಬಂದಿದ್ದಾರೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಜಮಾಲ್ ಸಿದ್ದಿಕಿ ಅವರು ಕಳೆದ ವರ್ಷ 812ನೇ ಉರೂಸ್ ಸಂದರ್ಭದಲ್ಲಿ ಪ್ರಧಾನಿ ಮೋದಿ ಪರವಾಗಿ ಅಜ್ಮೀರ್ ದರ್ಗಾಕ್ಕೆ ‘ಚಾದರ್’ ಅನ್ನು ಅರ್ಪಿಸಿದ್ದರು. ಇದೀಗ 11ನೇ ಬಾರಿಗೆ ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ಮೋದಿ ಚಾದರ್ ನ್ನು ಕಳುಹಿಸಿಕೊಟ್ಟಿದ್ದಾರೆ.

ಇತ್ತೀಚೆಗೆ ಅಜ್ಮೀರ್ ದರ್ಗಾ ದಲ್ಲಿ ಶಿವನ ದೇವಾಲಯವಿದೆ ಎಂದು ಹಿಂದೂ ಸೇನಾ ಸಂಘಟನೆಯು ಅಜ್ಮೀರ್ ಜಿಲ್ಲಾ ನ್ಯಾಯಾಲಯದಲ್ಲಿ ಮೊರೆ ಹೋಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸುವುದಾಗಿ 2024ರ ನವೆಂಬರ್ ನಲ್ಲಿ ನ್ಯಾಯಾಲಯ ಒಪ್ಪಿಕೊಂಡಿತ್ತು. ಈ ಬೆಳವಣಿಗೆಯು ಬಿಜೆಪಿ ಬಗ್ಗೆ ವ್ಯಾಪಕ ಟೀಕೆಗೆ ಕಾರಣವಾಗಿತ್ತು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ