ಡೊನಾಲ್ಡ್ ಟ್ರಂಪ್‌ಗೆ ಮತ್ತೆ ಒಲಿದ ಅಮೆರಿಕ ಅಧ್ಯಕ್ಷ ಸ್ಥಾನ: ಮೋದಿ ಸೇರಿದಂತೆ ವಿಶ್ವದ ನಾಯಕರಿಂದ ಅಭಿನಂದನೆ
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಜಯ ಗಳಿಸಿದ್ದಾರೆ. ಈ ಮೂಲಕ ಅಮೆರಿಕದ ಅಧ್ಯಕ್ಷರಾಗಿ
ಪುನರಾಗಮನದ ನಂತರ, ಭಾರತದ ಪ್ರಧಾನಿ ನರೇಂದ್ರ ಮೋದಿ, ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸೇರಿದಂತೆ ವಿಶ್ವದ ನಾಯಕರು ಅವರನ್ನು ಅಭಿನಂದಿಸಿದ್ದಾರೆ. ಅವರ ವಿಜಯವನ್ನು ಐತಿಹಾಸಿಕ ಸಾಧನೆ ಎಂದು ಶ್ಲಾಘಿಸಿದ್ದಾರೆ.
ಲಂಡನ್‌ನಿಂದ ನೀಡಿದ ಹೇಳಿಕೆಯಲ್ಲಿ ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್ ಭವಿಷ್ಯದ ಸಹಯೋಗದ ಬಗ್ಗೆ ತಮ್ಮ ಆಶಾವಾದವನ್ನು ಹಂಚಿಕೊಂಡಿದ್ದಾರೆ. ವಿಶಿಷ್ಟವಾದ “ಯುಕೆ-ಯುಎಸ್ ವಿಶೇಷ ಸಂಬಂಧ”ದ ಬಗ್ಗೆ ಒತ್ತಿ ಹೇಳಿದರು. “ನಿಮ್ಮ ಐತಿಹಾಸಿಕ ಚುನಾವಣಾ ವಿಜಯಕ್ಕಾಗಿ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಅಭಿನಂದನೆಗಳು” ಎಂದು ಸ್ಟಾರ್ಮರ್ ಹೇಳಿದರು.
“ಮುಂಬರುವ ವರ್ಷಗಳಲ್ಲಿ ನಿಮ್ಮೊಂದಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ” ಎಂದಿದ್ದಾರೆ.
ಇನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ-ಯುಎಸ್ ಸಮಗ್ರ ಜಾಗತಿಕ ಮತ್ತು ಕಾರ್ಯತಂತ್ರದ ಪಾಲುದಾರಿಕೆಗೆ ಬಲವಾದ ಭವಿಷ್ಯವನ್ನು ಒತ್ತಿ ಹೇಳಿದ್ದಾರೆ.
“ನಿಮ್ಮ ಐತಿಹಾಸಿಕ ಚುನಾವಣಾ ವಿಜಯಕ್ಕಾಗಿ ನನ್ನ ಸ್ನೇಹಿತ ಡೊನಾಲ್ಡ್ ಟ್ರಂಪ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ಹಿಂದಿನ ಅವಧಿಯ ಯಶಸ್ಸನ್ನು ನೀವು ಮತ್ತೆ ನಿರ್ಮಿಸುತ್ತಿರುವಾಗ, ನಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ನಮ್ಮ ಸಹಯೋಗವನ್ನು ನವೀಕರಿಸಲು ನಾನು ಎದುರು ನೋಡುತ್ತಿದ್ದೇನೆ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ. “ಒಟ್ಟಾಗಿ, ನಮ್ಮ ಜನರ ಸುಧಾರಣೆಗಾಗಿ ಮತ್ತು ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ಕೆಲಸ ಮಾಡೋಣ” ಎಂದಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj