ಅಮೆರಿಕದಲ್ಲಿ ಜೋ ಬೈಡನ್ ಜೊತೆ ನರೇಂದ್ರ ಮೋದಿ ಅಪರೂಪದಲ್ಲಿ ಅಪರೂಪದ ಪತ್ರಿಕಾಗೋಷ್ಠಿ..! ಇದು ‘ಬಿಗ್ ಡೀಲ್’ ಎಂದ ವೈಟ್ ಹೌಸ್ ಅಧಿಕಾರಿ..!
ಅಪರೂಪದ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ ಗುರುವಾರ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ ಎಂದು ಶ್ವೇತಭವನದ ಹಿರಿಯ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.
ಶ್ವೇತಭವನದ ಅಧಿಕಾರಿ ಇದನ್ನು ‘ಬಿಗ್ ಡೀಲ್’ ಎಂದು ಕರೆದಿದ್ದಾರೆ. ಪ್ರಧಾನಿ ಮೋದಿ ಮಾಧ್ಯಮಗೊಷ್ಟಿ ಈವರೆಗೆ ನಡೆಸಿಲ್ಲ. ಸುಮಾರು ಒಂಬತ್ತು ವರ್ಷಗಳ ಹಿಂದೆ ಪ್ರಧಾನಿಯಾದ ನಂತರ ಅವರು ಭಾರತದಲ್ಲಿ ಒಂದೇ ಒಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿಲ್ಲ.
ಮೇ 2019 ರಲ್ಲಿ ಅವರು ಒಮ್ಮೆ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು. ಆದರೆ ಎಂದಿಗೂ ಪತ್ರಕರ್ತರ ಪ್ರಶ್ನೆಗಳನ್ನು ತೆಗೆದುಕೊಳ್ಳಲಿಲ್ಲ. ಶ್ವೇತಭವನದ ರಾಷ್ಟ್ರೀಯ ಭದ್ರತಾ ವಕ್ತಾರ ಜಾನ್ ಕಿರ್ಬಿ ಅವರು ಈ ಪತ್ರಿಕಾಗೋಷ್ಠಿಯನ್ನು ‘ದೊಡ್ಡ ವಿಷಯ’ ಎಂದು ಶ್ವೇತಭವನ ಅರ್ಥಮಾಡಿಕೊಂಡಿದೆ ಎಂದು ಹೇಳಿದ್ದಾರೆ.
‘ಭೇಟಿಯ ಕೊನೆಯಲ್ಲಿ ಪ್ರಧಾನಿ ಮೋದಿ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸುತ್ತಿರುವುದಕ್ಕೆ ನಾವು ಕೃತಜ್ಞರಾಗಿರುತ್ತೇವೆ’ ಎಂದು ಕಿರ್ಬಿ ಹೇಳಿದರು. ಇದು ಮುಖ್ಯ ಎಂದು ನಾವು ಭಾವಿಸುತ್ತೇವೆ. ಇದರಿಂದ ನಮಗೆ ಸಂತೋಷವಾಗಿದೆ’ ಎಂದು ಅವರು ಹೇಳಿದ್ದಾರೆ.
ಅಂದಹಾಗೇ ಈ ಪತ್ರಿಕಾಗೋಷ್ಠಿಯ ಸ್ವರೂಪವು ಅಮೆರಿಕದ ಪತ್ರಕರ್ತರಿಂದ ಒಂದು ಪ್ರಶ್ನೆ ಮತ್ತು ಭಾರತೀಯ ಪತ್ರಕರ್ತರಿಂದ ಒಂದು ಪ್ರಶ್ನೆಯನ್ನು ಒಳಗೊಂಡಿರುತ್ತದೆ ಎಂದು ಕಿರ್ಬಿ ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























