10:36 PM Wednesday 27 - August 2025

ಮಹಾ ರೈಲು ದುರಂತ ಸ್ಥಳಕ್ಕೆ ಪ್ರಧಾನಿ ಭೇಟಿ, ಅವಲೋಕನ

03/06/2023

ಒಡಿಶಾದ ಬಾಲಸೋರ್ ​​ನಲ್ಲಿ ನಡೆದ ರೈಲು ಅಪಘಾತ ಸಂಭವಿಸಿದ ಸ್ಥಳಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿ ಪರಿಸ್ಥಿತಿ ಅವಲೋಕನ ನಡೆಸಿದ್ದಾರೆ.

ಅಂದಾಜಿನ ಪ್ರಕಾರ ಈ ರೈಲು ದುರಂತದಲ್ಲಿ 261 ಕ್ಕಿಂತಲೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 1000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಬಾಲಸೋರ್ ಜಿಲ್ಲೆಯ ಬಹನಾಗಾ ಬಜಾರ್ ನಿಲ್ದಾಣದಲ್ಲಿ ಘಟನೆ ನಡೆದ ಸ್ಥಳದ ಬಳಿ ಪ್ರಧಾನಿ ಮೋದಿ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಬಂದಿಳಿದರು. ಅಪಘಾತದಲ್ಲಿ ಗಾಯಗೊಂಡು  ಬಾಲಸೋರ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವರನ್ನೂ ಮೋದಿ ಭೇಟಿ ಮಾಡಲಿದ್ದಾರೆ.

ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿಯನ್ನು ಪರಿಶೀಲಿಸಲು ಇಂದು ಬೆಳಗ್ಗೆ ಪ್ರಧಾನಿ ಮೋದಿ ಸಭೆ ನಡೆಸಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version