ಅಂಗನವಾಡಿ ಮಕ್ಕಳ ಹಾಲಿನ ಪೌಡರ್ ಕದ್ದ ಬಿಜೆಪಿ ಅಭ್ಯರ್ಥಿ: ಪ್ರಧಾನಿ ಮೋದಿ ಪ್ರಚಾರ ಸಭೆ ರದ್ದು! - Mahanayaka

ಅಂಗನವಾಡಿ ಮಕ್ಕಳ ಹಾಲಿನ ಪೌಡರ್ ಕದ್ದ ಬಿಜೆಪಿ ಅಭ್ಯರ್ಥಿ: ಪ್ರಧಾನಿ ಮೋದಿ ಪ್ರಚಾರ ಸಭೆ ರದ್ದು!

pm modi
03/05/2023

ಕಲಬುರಗಿ: ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಮಣಿಕಂಠ ರಾಠೋಡ ಪರ ಮೇ 6ರಂದು ನಡೆಸಲು ಉದ್ದೇಶಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಚಾರ ಸಭೆಯನ್ನು ರದ್ದುಗೊಳಿಸಲಾಗಿದೆ.

ಮಣಿಕಂಠ ರಾಠೋಡ ರೌಡಿಶೀಟರ್ ಆಗಿದ್ದು, ಅಂಗನವಾಡಿ ಮಕ್ಕಳ ಹಾಲಿನ ಪೌಡರ್ ಕಳ್ಳತನ ಮಾಡಿರುವ ಅಪರಾಧ ಸಾಬೀತಾಗಿರುವ ಹಿನ್ನೆಲೆಯಲ್ಲಿ ಈತನ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ರೌಡಿಶೀಟರ್ ಪರ ಪ್ರಧಾನಿ ಮೋದಿ ಪ್ರಚಾರ ನಡೆಸಿದರೆ, ಪಕ್ಷಕ್ಕೆ ತೀವ್ರ ಹಾನಿಯಾಗುವ ಸಂಭವವಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರ ಪ್ರಚಾರ ಸಭೆತನ್ನು ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ.

ಪ್ರಧಾನಿ ಮೋದಿ ಅವರ ಸಾರ್ವಜನಿಕ ಸಭೆ ರದ್ದುಗೊಂಡಿರುವ ವಿಚಾರವನ್ನು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ