ಪ್ರಧಾನಿ ಮೋದಿ ದ್ವೇಷ ಭಾಷಣ ಮಾಡಿದ್ದಾರೆ: ಚುನಾವಣಾ ಆಯೋಗಕ್ಕೆ ದೂರು ನೀಡಿದ ನಿವೃತ್ತ ಪ್ರಾಧ್ಯಾಪಕ - Mahanayaka

ಪ್ರಧಾನಿ ಮೋದಿ ದ್ವೇಷ ಭಾಷಣ ಮಾಡಿದ್ದಾರೆ: ಚುನಾವಣಾ ಆಯೋಗಕ್ಕೆ ದೂರು ನೀಡಿದ ನಿವೃತ್ತ ಪ್ರಾಧ್ಯಾಪಕ

27/04/2024


Provided by

ರಾಜಸ್ಥಾನದ ಬನ್ಸ್‌ವಾರಾದಲ್ಲಿ ಏಪ್ರಿಲ್ 21ರಂದು ಪ್ರಧಾನಿ ನರೇಂದ್ರ ಮೋದಿ ಕೋಮು ದ್ವೇಷ ಭಾಷಣ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅಹಮದಾಬಾದ್‌ನ ಐಐಎಂನ ನಿವೃತ್ತ ಪ್ರಾಧ್ಯಾಪಕ ಜಗದೀಪ್ ಚೋಕರ್ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಅವರ ಪತ್ರಕ್ಕೆ 93 ಮಂದಿ ನಿವೃತ್ತ ಅಧಿಕಾರಿಗಳು ಸಹಿ ಹಾಕಿದ್ದಾರೆ.

ಮೋದಿ ಅವರ ಭಾಷಣವು ಮುಸ್ಲಿಮರ ವಿರುದ್ಧ ದ್ವೇಷ ತುಂಬಿದ ಟೀಕೆಗಳಿಂದ ಕೂಡಿತ್ತು. ಅವರು ಮುಸ್ಲಿಮರನ್ನು ‘ನುಸುಳುಕೋರರು’ ಎಂದಿದ್ದರು. “ವಿರೋಧ ಪಕ್ಷಗಳು ಅಧಿಕಾರಕ್ಕೆ ಬಂದರೆ, ಹಿಂದೂಗಳ ಮಂಗಳಸೂತ್ರ ಮತ್ತು ಭೂಮಿಯನ್ನು ಕಸಿದುಕೊಂಡು, ಮುಸ್ಲಿಮರಿಗೆ ನೀಡುತ್ತಾರೆ” ಎಂದು ಕೋಮು ಪ್ರಚೋದನೆಯ ಹೇಳಿಕೆ ನೀಡಿದ್ದರು.

ಅವರ ಈ ಹೇಳಿಕೆಗಳನ್ನು ಖಂಡಿಸಿ ಈ ಕ್ರಮಕ್ಕೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ಸುಮಾರು 2,200ಕ್ಕೂ ಹೆಚ್ಚು ದೂರುಗಳನ್ನು ನೀಡಲಾಗಿದೆ. ಆದರೆ, ಆಯೋಗವು ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಬುಧವಾರ, ವಿವರ ಕೇಳಿ ನೋಟಿಸ್‌ಅನ್ನು ಮಾತ್ರವೇ ಜಾರಿ ಮಾಡಿದೆ.
“ನಾವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಮಾಜಿ ಅಧಿಕಾರಿಗಳು. ನಾವು ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ. ಆದರೆ, ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಆದರ್ಶಗಳಿಗೆ ನಾವು ಬದ್ಧರಾಗಿದ್ದೇವೆ” ಎಂದು ಪತ್ತರಕ್ಕೆ ಸಹಿ ಮಾಡಿರುವ ನಿವೃತ್ತ ಅಧಿಕಾರಿಗಳು ಹೇಳಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ