4:08 AM Saturday 25 - October 2025

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಕಾಫಿ ತೋಟದ ಮಾಲಿಕ, ಓರ್ವ ಅಪ್ರಾಪ್ತನ ಸಹಿತ ನಾಲ್ವರ ಬಂಧನ

pocso act
14/12/2022

ಹಾಸನ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಪರಿಣಾಮ ಆಕೆ ಗರ್ಭಿಣಿಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆ ಹಾಗೂ ಇನ್ನಿತರ ಪ್ರಕರಣಗಳಲ್ಲಿ  ಕಾಫಿ ತೋಟದ ಮಾಲಿಕ ಸೇರಿದಂತೆ  ನಾಲ್ವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಕೂಲಿ ಅರಸಿ ಬಂದು ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಬಾಲಕಿಯ ಮುಗ್ಧತೆಯನ್ನು ದುರ್ಬಳಕೆ ಮಾಡಿಕೊಂಡ ಆರೋಪಿಗಳು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಫಿ ತೋಟದ ಮಾಲಿಕ ಸುದರ್ಶನ್, ಸ್ವಾಗತ್, ಪಾಪಣ್ಣ ಹಾಗೂ ಮತ್ತೋರ್ವ ಅಪ್ರಾಪ್ತ ವಯಸ್ಸಿನ ಬಾಲಕನನ್ನು  ಪೊಲೀಸರು ಬಂಧಿಸಿದ್ದಾರೆ.

ಅನಾರೋಗ್ಯ ಹಿನ್ನೆಲೆಯಲ್ಲಿ ಬಾಲಕಿ ಆಸ್ಪತ್ರೆಗೆ ಆಗಮಿಸಿದ ವೇಳೆ ಆಕೆ ಗರ್ಭೀಣಿ ಅನ್ನೋ ವಿಚಾರ ತಿಳಿದು ಬಂದಿತ್ತು. ಈ ಬಗ್ಗೆ ಬಾಲಕಿಯನ್ನು ವಿಚಾರಿಸಿದಾಗ ಲೈಂಗಿಕ ದೌರ್ಜನ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಸಂತ್ರಸ್ತ ಬಾಲಕಿಗೆ ಮಕ್ಕಳ ಕಲ್ಯಾಣ ಸಮಿತಿ ಆಶ್ರಯ ನೀಡಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಡಬ್ಲ್ಯುಸಿ ನೇತೃತ್ವದಲ್ಲಿ ದೂರು ನೀಡಲಾಗಿದ್ದು, ನಾಲ್ವರ ವಿರುದ್ಧವೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version