ಪೋಕ್ಸೋ ಕೇಸ್: ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್
02/12/2025
ನವದೆಹಲಿ: ಪೋಕ್ಸೋ ಕೇಸ್ ಗೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೈಸಿಂಗ್ ಜೊಯ್ ಮಾಲ್ಯ ಅವರನ್ನೊಳಗೊಂಡ ಪೀಠ ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ. ಸಿಐಡಿ ಮತ್ತು ಸಂತ್ರಸ್ತ ಬಾಲಕಿಗೆ ನೋಟಿಸ್ ಜಾರಿ ಮಾಡಿದೆ.
ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಪಡಿಸಲು ನವೆಂಬರ್ 13ರಂದು ಕರ್ನಾಟಕ ಹೈಕೋರ್ಟ್ ನಿರಾಕರಿಸಿತ್ತು. ಆ ಬೆನ್ನಲ್ಲೇ ಬಿಎಸ್ ವೈ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD
























