ಪೋಕ್ಸೋ ಕೇಸ್: ಬಂಧನದ ಭೀತಿ ಇಲ್ಲದೇ ಸಿಐಡಿ ವಿಚಾರಣೆಗೆ ಹಾಜರಾಗಲಿರುವ ಯಡಿಯೂರಪ್ಪ

yediyurappa
17/06/2024

ಬೆಂಗಳೂರು:  ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಸಿಐಡಿ ಮುಂದೆ ಹಾಜರಾಗಿ ಹೇಳಿಕೆ ನೀಡಲಿದ್ದಾರೆ.

ಯಡಿಯೂರಪ್ಪನವರನ್ನು ಬಂಧಿಸದಂತೆ ಹೈಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ ಬಂಧನದ ಭೀತಿಯಿಲ್ಲದೇ ಸಿಐಡಿ ಮುಂದೆ ಬಿ.ಎಸ್.ಯಡಿಯೂರಪ್ಪ  ಹಾಜರಾಗಲಿದ್ದಾರೆ.

ಬೆಂಗಳೂರಿನಲ್ಲಿರುವ ಸಿಐಡಿ ಮುಖ್ಯ ಕಚೇರಿಯಲ್ಲಿ ಬಿಎಸ್‌ ವೈ ತಮ್ಮ ವಕೀಲರ ಸಮೇತ ಹಾಜರಾಗಿ ವಿಚಾರಣೆ ಎದುರಿಸಲಿದ್ದಾರೆ ಎನ್ನಲಾಗಿದೆ.

ಬಿಎಸ್‌ ವೈ ಅಪ್ರಾಪ್ತ ವಯಸ್ಸಿನ ಹುಡುಗಿ ಮೇಲೆ ಅತ್ಯಾಚಾರ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಬಾಲಕಿಯ ತಾಯಿ ಈ ಆರೋಪ ಮಾಡಿದ್ದು, ಈಕೆ ಇತ್ತೀಚೆಗೆ ನಿಧನರಾಗಿದ್ದರು. ಪ್ರಕರಣ ನಡೆದ ಸಂದರ್ಭದಲ್ಲಿ ಯಾರೆಲ್ಲ ಬಂದಿದ್ದರು, ಅಂದು ಏನಾಯಿತು ಇತ್ಯಾದಿ ಪ್ರಕರಣದ ಮಾಹಿತಿಯನ್ನು ಬಿಎಸ್‌ ವೈ ಅವರಿಂದ ಸಿಐಡಿ ಪಡೆಯಲಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version