ಲೈಂಗಿಕ ದೌರ್ಜನ್ಯ  ನಡೆಸಿ ವಿಡಿಯೋ ಮಾಡಿಕೊಳ್ಳುತ್ತಿದ್ದ ಉದ್ಯಮಿ: ಕೇಸ್ ದಾಖಲಾಗುತ್ತಿದ್ದಂತೆಯೇ ಎಸ್ಕೇಪ್ - Mahanayaka

ಲೈಂಗಿಕ ದೌರ್ಜನ್ಯ  ನಡೆಸಿ ವಿಡಿಯೋ ಮಾಡಿಕೊಳ್ಳುತ್ತಿದ್ದ ಉದ್ಯಮಿ: ಕೇಸ್ ದಾಖಲಾಗುತ್ತಿದ್ದಂತೆಯೇ ಎಸ್ಕೇಪ್

shreyas
02/06/2024

ಉಡುಪಿ: ಉದ್ಯಮಿಯೋರ್ವ  ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದ್ದು, ಇದೀಗ ತನ್ನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗುತ್ತಿದ್ದಂತೆಯೇ  ಆರೋಪಿ ಪರಾರಿಯಾಗಿದ್ದಾನೆ.


Provided by

ಶ್ರೇಯಸ್ ನಾಯ್ಕ(25)  ಆರೋಪಿಯಾಗಿದ್ದು,  ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ವರದಿಗಳ ಪ್ರಕಾರ, ಈತ ತನ್ನ ಪ್ರಭಾವ ಬಳಸಿ ಶಾಲಾ ಕಾಲೇಜುಗಳ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದು, ತನ್ನ ಕೃತ್ಯವನ್ನು ವಿಡಿಯೋ ಮಾಡಿಕೊಳ್ಳುತ್ತಿದ್ದ ಎನ್ನಲಾಗಿದೆ.


Provided by

ಕಳೆದ ಒಂದು ವರ್ಷಗಳಿಂದ ಬಾಲಕಿಯೋರ್ವಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ.  ಇಲ್ಲಿನ ಹಾಲಾಡಿ ರಸ್ತೆಯ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶದಲ್ಲಿ ಕಾರಿನಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದು, ಲೈಂಗಿಕ ದೌರ್ಜನ್ಯದ ದೃಶ್ಯವನ್ನು ವಿಡಿಯೋ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡಿ ಪದೇ ಪದೇ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಎನ್ನಲಾಗಿದೆ.

ಲೈಂಗಿಕ ದೌರ್ಜನ್ಯದ ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಈ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.  ಮೇ 18ರಂದು ಆರೋಪಿಯ ವಿರುದ್ಧ ದೂರು ದಾಖಲಾಗಿದ್ದು, ದೂರು ದಾಖಲಾಗುತ್ತಿದಂತೆಯೇ  ಶ್ರೇಯಸ್ ಪರಾರಿಯಾಗಿದ್ದಾನೆ. ಈತನ ಪತ್ತೆಗೆ ಶೋಧ ನಡೆಸಲಾಗುತ್ತಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ