ಭೂಪರಿಹಾರಕ್ಕಾಗಿ ಒತ್ತಾಯಿಸಿ ಪ್ರತಿಭಟಿಸಿದ ರೈತರನ್ನೇ ಬಂಧಿಸಿದ ಪೊಲೀಸರು
ಭೂ ಪರಿಹಾರ ಮತ್ತು ಇತರ ಬೇಡಿಕೆಗಳಿಗಾಗಿ ದೆಹಲಿಗೆ ಪಾದಯಾತ್ರೆ ನಡೆಸುತ್ತಿರುವ ರೈತರನ್ನು ನೋಡ್ಯಾದ ‘ದಲಿತ ಪ್ರೇರಣಾ ಸ್ಥಳ’ದಲ್ಲಿ ಬಂಧಿಸಲಾಗಿದೆ. ಸಂಯುಕ್ತ ಕಿಸಾನ್ ಮೋರ್ಚಾದ ಕರೆ ಮೇರೆಗೆ ಸೋಮವಾರ ಉತ್ತರ ಪ್ರದೇಶದ ವಿವಿಧ ಭಾಗಗಳಿಂದ ಜಮಾಯಿಸಿದ ಪ್ರತಿಭಟನಾಕಾರರು ಏಳು ದಿನಗಳಲ್ಲಿ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಷ್ಟ್ರ ರಾಜಧಾನಿಗೆ ತಮ್ಮ ಮೆರವಣಿಗೆಯನ್ನು ಪುನರಾರಂಭಿಸುವುದಾಗಿ ಎಚ್ಚರಿಕೆ ನೀಡಿದ್ದರು.
ಭಾರತೀಯ ಕಿಸಾನ್ ಪರಿಷತ್ ಅಧ್ಯಕ್ಷ ಸುಖಬೀರ್ ಖಲೀಫಾ ಸೇರಿದಂತೆ 160 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರಲ್ಲಿ ಮಹಿಳೆಯರು ಮತ್ತು ಭಾರತೀಯ ಕಿಸಾನ್ ಯೂನಿಯನ್ ಪಶ್ಚಿಮ ಉತ್ತರ ಪ್ರದೇಶ ರಾಜ್ಯ ಅಧ್ಯಕ್ಷರಾದ ಖಲೀಫಾ ಮತ್ತು ಪವನ್ ಖತಾನಾ ಅವರಂತಹ ಹಲವಾರು ರೈತ ಮುಖಂಡರು ಸೇರಿದ್ದಾರೆ.
ಪ್ರತಿಭಟನಾಕಾರರನ್ನು ನೋಯ್ಡಾದ ಲುಕ್ಸರ್ ಜೈಲಿಗೆ ಕರೆದೊಯ್ಯಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಮ್ಮ ಬೇಡಿಕೆಗಳು ಈಡೇರುವವರೆಗೂ ಹೋರಾಟವನ್ನು ಮುಂದುವರೆಸುವುದಾಗಿ ಖಲೀಫಾ ತಿಳಿಸಿರುವುದಾಗಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ರೈತರ ಬಂಧನವನ್ನು ಖಂಡಿಸಿ ನರೇಶ್ ಟಿಕಾಯತ್ ನೇತೃತ್ವದ ಭಾರತೀಯ ಕಿಸಾನ್ ಯೂನಿಯನ್ ಮುಜಾಫರ್‌ನಗರದಲ್ಲಿ ‘ಮಹಾ ಪಂಚಾಯತ್’ ಕರೆದಿದೆ.
ಸರ್ಕಾರ ಸ್ವಾಧೀನಪಡಿಸಿಕೊಂಡಿರುವ ಭೂಮಿಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿ ಸೋಮವಾರ ಮಹಾಮಾಯಾ ಮೇಲ್ಸೇತುವೆ ಬಳಿ ರೈತರು ಜಮಾಯಿಸಿ ದೆಹಲಿಗೆ ತೆರಳಿದ್ದರು. ಆದರೆ, ಅವರನ್ನು ದಲಿತ ಪ್ರೇರಣಾ ಸ್ಥಳದ ಬಳಿ ಪೊಲೀಸರು ತಡೆದರು, ನಂತರ ಅವರು ಅಲ್ಲಿ ಧರಣಿ ಕುಳಿತರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj