1:23 PM Sunday 28 - September 2025

‘ಬಿಗ್ ಬಾಸ್ ಮನೆಗೆ ಬಾಂಬ್ ಇಡುತ್ತೇನೆ’ ಎಂದ ಯುವಕನಿಗೆ ಬಿಸಿಮುಟ್ಟಿಸಿದ ಪೊಲೀಸರು!

27/09/2025

ಈ ಬಾರಿ ಬಿಗ್ ಬಾಸ್ ಮನೆಗೆ ನನ್ನನ್ನು ಕರೆಸಿಕೊಳ್ಳದಿದ್ದರೆ, ಬಿಗ್ ಬಾಸ್ ಮನೆಗೆ ಬಾಂಬ್ ಇಡುವುದಾಗಿ ವಿಡಿಯೋ  ಮಾಡಿ, ಮಮ್ಮಿ ಅಶೋಕ್19’ ಹೆಸರಿನ ಇನ್​​ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿದ್ದ ಯುವಕನಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

ಬಿಗ್ ಬಾಸ್ ಮನೆಯ ಮುಂಭಾಗದಲ್ಲಿ ವಿಡಿಯೋ ಮಾಡಿದ್ದ ಅಶೋಕ್ ಎಂಬ ಯುವಕ, ಈ ಬಾರಿ ನನ್ನನ್ನು ಬಿಗ್ ಬಾಸ್ ಮನೆಗೆ ಕರೆದುಕೊಳ್ಳದಿದ್ದರೆ, ಬಿಗ್ ಬಾಸ್ ಮನೆಗೆ ಬಾಂಬ್ ಇಡುವುದಾಗಿ ಹೇಳಿದ್ದ.

ವಿಡಿಯೋವನ್ನು ಗಮನಿಸಿ ಯುವಕನನ್ನು ಪೊಲೀಸ್ ಠಾಣೆಗೆ ಕರೆದು ಸೂಕ್ತ ಎಚ್ಚರಿಕೆಯನ್ನು ನೀಡಿದ್ದಾರೆ. ಪ್ರಸ್ತುತ ಎನ್​​ಸಿಆರ್ ಮಾತ್ರವೇ ದಾಖಲಿಸಲಾಗಿದ್ದು, ಎಚ್ಚರಿಕೆಯನ್ನಷ್ಟೆ ನೀಡಿ ಕಳಿಸಲಾಗಿದೆ ಎಂದು ತಿಳಿದು ಬಂದಿದೆ.

ಘಟನೆ ಸಂಬಂಧ ವಿಡಿಯೋವೊಂದನ್ನು ಹಂಚಿಕೊಂಡಿರುವ ಪೊಲೀಸರು, ಬೆಂಗಳೂರಿಗರೇ ಗಮನಿಸಿ: ಆನ್‌ಲೈನ್‌ನಲ್ಲಿ ಮಾಡಿದ ಬೆದರಿಕೆಯನ್ನು ನೇರವಾಗಿ ಮಾಡಿದ ಬೆದರಿಕೆಯಂತೆಯೇ ಗಂಭೀರವಾಗಿ ಪರಿಗಣಿಸಲಾಗುತ್ತದೆ. ಟೈಪ್ ಮಾಡುವ ಮೊದಲು ಯೋಚಿಸಿ — ಏಕೆಂದರೆ ನಿಮ್ಮ ಪೋಸ್ಟ್‌ ಗಳು ನಿಮ್ಮನ್ನು ಜೈಲಿಗೆ ಕಳುಹಿಸಬಹುದು ಎಂದು ಬರೆದುಕೊಂಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version