ಪಿಯು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ಪೊಲೀಸ್ ಕಾನ್‌’ಸ್ಟೆಬಲ್ ಬಂಧನ

pocso act
25/01/2026

ಬೆಂಗಳೂರು: ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರಥಮ ವರ್ಷದ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.

ಆರ್‌.ಟಿ.ನಗರ ಪೊಲೀಸ್ ಠಾಣೆಗೆ ಸೇರಿದ ಕಾನ್‌’ಸ್ಟೆಬಲ್ ಯಮುನಾ ನಾಯಕ್ ಬಂಧಿತ ಆರೋಪಿ. ಘಟನೆಯ ವಿವರಗಳ ಪ್ರಕಾರ, ಆರೋಪಿ ಯಮುನಾ ನಾಯಕ್ ಅವರು ಫ್ರೀಡಂ ಪಾರ್ಕ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಪೋಕ್ಸೋ ಕಾಯ್ದೆಯಡಿ ಪ್ರಕರಣ: ತಮಗೆ ಎದುರಾದ ಕಿರುಕುಳದ ಕುರಿತು ವಿದ್ಯಾರ್ಥಿನಿಯು ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಕಾರ್ಯಪ್ರವೃತ್ತರಾದ ಪೊಲೀಸರು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ರಕ್ಷಣಾ ಇಲಾಖೆಯಲ್ಲಿದ್ದುಕೊಂಡು ಸಾರ್ವಜನಿಕರ ರಕ್ಷಣೆ ಮಾಡಬೇಕಾದ ಪೊಲೀಸರೇ ಇಂತಹ ಕೃತ್ಯದಲ್ಲಿ ತೊಡಗಿರುವುದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version